Saturday, January 16, 2021
Home ಅಂತರ್ ರಾಜ್ಯ ತಮಿಳುನಾಡು 10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ಡೇಟಾ: ತಮಿಳುನಾಡು ಸರ್ಕಾರ

ಇದೀಗ ಬಂದ ಸುದ್ದಿ

10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ಡೇಟಾ: ತಮಿಳುನಾಡು ಸರ್ಕಾರ

 ಚೆನ್ನೈ, ಜ. 10: ಸುಮಾರು 10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತಮಿಳುನಾಡು ಸರ್ಕಾರ ಸಂಕ್ರಾಂತಿಗೆ ಭರ್ಜರಿ ಉಡುಗೊರೆ ನೀಡಿದೆ.

ತಮಿಳುನಾಡು ವಿದ್ಯಾರ್ಥಿಗಳಿಗೆ ಉಚಿತವಾಗಿ ಇಂಟರ್ನೆಟ್ ಸೌಲಭ್ಯ ಕಲ್ಪಿಸಲಾಗುತ್ತಿದೆ. ತಮಿಳುನಾಡು ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ 2ಜಿಬಿ ಡೇಟಾದೊಂದಿಗೆ ನೆಟ್ ಸೌಲಭ್ಯ ಕಲ್ಪಿಸಿಕೊಡುತ್ತಿದೆ.

ಏಪ್ರಿಲ್‌ನಲ್ಲಿ ಪರೀಕ್ಷೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ನಾಲ್ಕು ತಿಂಗಳ ಕಾಲ ಉಚಿತ ಇಂಟರ್‌ನೆಟ್ ಸೌಲಭ್ಯ ಕಲ್ಪಿಸಲಾಗುತ್ತದೆ. ಆನ್‌ಲೈನ್ ಕ್ಲಾಸ್‌ಗೆ ಅನುಕೂಲವಾಗುವಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಆನ್‌ಲೈನ್‌ ಕ್ಲಾಸ್‌ಗೆ 2 ಜಿಬಿ ಡೇಟಾವನ್ನು ಬಳಸಿಕೊಳ್ಳಬಹುದಾಗಿದೆ.

ಸರ್ಕಾರಿ ಅನುದಾನಿತ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜುಗಳು, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳಿಗೆ ಇದು ಅನ್ವಯಿಸುತ್ತದೆ. ಒಟ್ಟು 9,69,047 ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

ಜನವರಿಯಿಂದ ಏಪ್ರಿಲ್‌ವರೆಗೆ ಡಾಟಾವನ್ನು ನೀಡಲಾಗುತ್ತದೆ. ಸರ್ಕಾರದ ಅನುದಾನಿತ ಕಾಳೇಜುಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಗಿದೆ.

TRENDING