Monday, January 25, 2021
Home ಸುದ್ದಿ ಜಾಲ ಆಧಾರ್, ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ಆಧಾರ್, ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್

ದಾವಣಗೆರೆ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು 2020-21ನೇ ಸಾಲಿನ ಪ.ಜಾತಿ ಪ.ಪಂಗಡ ಉಪಯೋಜನೆಯ ಸಮೃದ್ಧಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬೀದಿಬದಿ ವ್ಯಾಪಾರ ಮಾಡುವ ಮಹಿಳೆಯರಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಿದೆ.

ಪರಿಶಿಷ್ಟ ಜಾತಿಯ 37 ಹಾಗು ಪರಿಶಿಷ್ಟ ಪಂಗಡದ 532 ಸೇರಿದಂತೆ ದಾವಣಗೆರೆ ಜಿಲ್ಲೆಗೆ ಒಟ್ಟು 569 ಭೌತಿಕ ಗುರಿಯನ್ನು ನಿಗದಿಪಡಿಸಲಾಗಿದ್ದು, ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರು ಅರ್ಜಿ ಸಲ್ಲಿಸಬಹುದು.

ನಗರ ಹಾಗು ಗ್ರಾಮೀಣ ಪ್ರದೇಶದ ಬೀದಿಬದಿಯ ಮಹಿಳಾ ವ್ಯಾಪಾರಿಗಳಿಗೆ ತಲಾ ರೂ.10,000/-ದಂತೆ ಪ್ರೋತ್ಸಾಹಧನ ನೀಡಲು ಅವಕಾಶವಿದ್ದು, ಪೌರ ಸಂಸ್ಥೆಗಳ ವ್ಯಾಪಾರ ಪರವಾನಿಗೆ ಪಡೆದ ಬೀದಿಬದಿ ವ್ಯಾಪಾರ ಮಾಡುತ್ತಿರುವ ಮಹಿಳಾ ವ್ಯಾಪಾರಿಗಳು ಅರ್ಜಿ ಸಲ್ಲಿಸಿ ಈ ಸೌಲಭ್ಯ ಪಡೆಯಬಹುದು.

ಫಲಾನುಭವಿಗಳಿಗೆ ಇರಬೇಕಾದ ಅರ್ಹತೆ: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಮಹಿಳೆಯರಾಗಿದ್ದು, 18 ರಿಂದ 60 ವರ್ಷ ವಯೋಮಾನದವಾರಾಗಿರಬೇಕು. ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಪೌರಾಡಳಿತ ಇಲಾಖೆಯಲ್ಲಿ ‘ಬೀದಿಬದಿ ವ್ಯಾಪಾರಿ’ ಎಂದು ನೊಂದಣಿ ಮಾಡಿಸಿರುವ ಗುರುತಿನ ಚೀಟಿಯನ್ನು ಹೊಂದಿರಬೇಕು. ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿ.ಡಿ.ಓ) ರವರಿಂದ ಬೀದಿಬದಿ ವ್ಯಾಪಾರಿ ಎಂದು ದೃಢೀಕರಿಸಿದ ದಾಖಲೆಯನ್ನು ಪಡೆದಿರಬೇಕು. ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ಮತ್ತು ಬಿ.ಪಿ.ಎಲ್. ಕಾರ್ಡ್‍ಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ರಾಷ್ಟ್ರೀಕೃತ ಬ್ಯಾಂಕ್‍ನಲ್ಲಿ ಕಡ್ಡಾಯವಾಗಿ ಖಾತೆಯನ್ನು ಹೊಂದಿರಬೇಕು. ಖಾತೆಯು ಆಧಾರ್ ಸೀಡಿಂಗ್ ಆಗಿದ್ದು ಚಾಲ್ತಿಯಲ್ಲಿರಬೇಕು. ಒಬ್ಬ ಫಲಾನುಭವಿ ಕೇವಲ ಒಂದು ಬಾರಿ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಸೌಲಭ್ಯ ಪಡೆಯಲು ಕಡ್ಡಾಯವಾಗಿ ಸಲ್ಲಿಸಬೇಕಾದ ದಾಖಲಾತಿಗಳು:ನಿಗದಿತ ಅರ್ಜಿ ನಮೂನೆ (ದ್ವಿಪ್ರತಿಯಲ್ಲಿ), ಬ್ಯಾಂಕ್ ಖಾತೆಯ ಪುಸ್ತಕದ ನಕಲು ಪ್ರತಿ ಮತ್ತು ಬ್ಯಾಂಕಿನ ಹೆಸರು ಮತ್ತು ಶಾಖೆಯ ಹೆಸರು ಹಾಗೂ ಅದರ ಐ.ಎಫ್.ಎಸ್.ಸಿ. ಕೋಡ್ ದಾಖಲೆ. ಅರ್ಜಿದಾರಳ ವಯಸ್ಸು ದೃಢೀಕರಿಸುವ ದಾಖಲೆ ಕುಟುಂಬದ ಬಿ.ಪಿ.ಎಲ್. ಕಾರ್ಡ್ ಹಾಗು ಜಾತಿ ಪ್ರಮಾಣ ಪತ್ರದ ನಕಲು ಪ್ರತಿ ಫಲಾನುಭವಿಯ ಆಧಾರ ಕಾರ್ಡ್ ಬೀದಿಬದಿ ವ್ಯಾಪಾರಿ ಎಂದು ಪೌರಾಡಳಿತ ಇಲಾಖೆಯಿಂದ ಪಡೆದ ಗುರುತಿನ ಚೀಟಿ/ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಧೃಢೀಕರಿಸಿ ನೀಡಿರುವÀ ಪತ್ರ. ಈಗಾಗಲೇ ಬೀದಿಬದಿ ವ್ಯಾಪಾರ ಮಾಡುತ್ತಿರುವ ಸ್ಥಳದ ಭಾವಚಿತ್ರ (ಫಲಾನುಭವಿಯನ್ನೊಳಗೊಂಡಂತೆ)

ಅರ್ಜಿ ಸಲ್ಲಿಸುವವರು ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅರ್ಹ ದಾಖಲೆಗಳೊಂದಿಗೆ ಜ.27 ರೊಳಗಾಗಿ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಿಗೆ ಸಲ್ಲಿಸತಕ್ಕದ್ದು. ಜಿಲ್ಲಾಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08192-296268 ನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

TRENDING