Tuesday, January 26, 2021
Home ಸುದ್ದಿ ಜಾಲ ಐಟಿ ಕಂಪನಿಗಳ ಉದ್ಯೋಗಿಗಳಿಗೆ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ಐಟಿ ಕಂಪನಿಗಳ ಉದ್ಯೋಗಿಗಳಿಗೆ ಗುಡ್ ನ್ಯೂಸ್

ನವದೆಹಲಿ : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದೇಶಾದ್ಯಂತ ಬಹುತೇಕ ಐಟಿ ಕಂಪನಿಗಳು ಮನೆಯಿಂದಲೇ ಕೆಲಸ ಮಾಡುವ ಆಯ್ಕೆ ನೀಡಿದ್ದು, ಸದ್ಯ ಕೊರೊನಾ ವೈರಸ್ ಸೋಂಕಿನ ಅಬ್ಬರ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ವರ್ಕ್ ಫ್ರಮ್ ಹೋಂ ಕೈಬಿಡಲು ಕಂಪನಿಗಳು ನಿರ್ಧರಿಸಿವೆ ಎನ್ನಲಾಗಿದೆ.

2020-21 ರ ಆರ್ಥಿಕ ವರ್ಷದಲ್ಲಿ ಸಂಪೂರ್ಣವಾಗಿ ವರ್ಕ್ ಫ್ರಂ ಹೋಂ ನಡೆದಿದ್ದು, ಮುಂದಿನ ಆರ್ಥಿಕ ವರ್ಷದ ವೇಳೆಗೆ ಅನೇಕ ಕಂಪನಿಗಳು ತಮ್ಮ ಉದ್ಯೋಗಿಗಳನ್ನು ಕಚೇರಿಗೆ ಕರೆಸಿಕೊಳ್ಳಲು ಮುಂದಾಗಿವೆ ಎನ್ನಲಾಗಿದೆ.ಹೀಗಾಗಿ ಕೆಲವು ಐಟಿ ಕಂಪನಿಗಳು ಕಚೇರಿಗಾಗಿ ಕಟ್ಟಡಗಳನ್ನು ಬಾಡಿಗೆ ತೆಗೆದುಕೊಳ್ಳುವ ಪ್ರಕ್ರಿಯೆ ಆರಂಭಿಸಿವೆ.

ಭಾರತದಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡ ನಂತರ ಬಹುತೇಕ ಐಟಿ ಕಂಪನಿಗಳು ಮನೆಯಿಂದಲೇ ಕೆಲಸ ಮಾಡುವ ಆಯ್ಕೆ ನೀಡಿವೆ. ಮನೆಯಿಂದ ಕೆಲಸ ಮಾಡೋದು ತುಂಬ ಕಿರಿಕಿರಿಯಾಗುತ್ತಿದೆ ಎಂದು ಹಲವು ಉದ್ಯೋಗಿಗಳು ಹೇಳಿದ್ದರು. ಇದೀಗ ವರ್ಕ್ ಫ್ರಂ ಹೋಂ ಕೊನೆಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

TRENDING