ಬೆಂಗಳೂರು : ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆ ಸುರಿಯುತ್ತಿದ್ದು, ಮುಂದಿನ ಎರಡು ದಿನ ಮಳೆ ಮುಂದುವರೆಯಲಿದ್ದು, ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಇಂದು ಭಾರೀ ಮಳೆಯಾಗಲಿದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ರಾಮನಗರ ಇನ್ನಿತರ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.