Monday, January 25, 2021
Home ರಾಜ್ಯ ರಾಜ್ಯ ಸರ್ಕಾರದಿಂದ ಗ್ರಾಮೀಣಾ ಜನತೆಗೆ ಸಿಹಿಸುದ್ದಿ

ಇದೀಗ ಬಂದ ಸುದ್ದಿ

ರಾಜ್ಯ ಸರ್ಕಾರದಿಂದ ಗ್ರಾಮೀಣಾ ಜನತೆಗೆ ಸಿಹಿಸುದ್ದಿ

ಬೆಂಗಳೂರು: ‘ಮನೆ ಮನೆಗೆ ಗಂಗೆ’ ಯೋಜನೆಯಡಿ ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದ 91.19 ಲಕ್ಷ ಗ್ರಾಮೀಣ ಕುಟುಂಬಗಳಿಗೆ ನೀರಿನ ಸಂಪರ್ಕ ಕಲ್ಪಿಸಲಾಗುವುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು, ಇದೇ ವೇಳೆ ಅವರು ಮಾತನಾಡುತ್ತ, ‘ಪ್ರಸಕ್ತ ಸಾಲಿನಲ್ಲಿ 23.57 ಲಕ್ಷ ಕುಟುಂಬಗಳು ನಲ್ಲಿ ಸಂಪರ್ಕ ಪಡೆಯಲಿದ್ದು, ಈ ಮೂಲಕ ಗ್ರಾಮೀಣ ಪ್ರದೇಶದ ಪ್ರತಿ ವ್ಯಕ್ತಿಗೆ ದಿನಕ್ಕೆ 55 ಲೀಟರ್ ಶುದ್ಧ ಕುಡಿಯುವ ನೀರು ನೀಡಲಾಗುವುದು ಅಂತ ಅವರು ಹೇಳಿದರು.

ಇದೇ ವೇಳೆ ಅವರು ಮಾತನಾಡಿ, ‘ಕೇಂದ್ರ ಸರ್ಕಾರದ ಜಲಜೀವನ್‌ ಮಿಷನ್‌ ಯೋಜನೆಯನ್ನು ‘ಮನೆ ಮನೆಗೆ ಗಂಗೆ’ ಹೆಸರಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಅಂಥ ಅವರು ಹೇಳಿದರು. ಇನ್ನೂ ಈಗಾಗಲೇ 24.72 ಲಕ್ಷ ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸಲಾಗಿದ್ದು, ಉಳಿದ 66.47 ಲಕ್ಷ ಕುಟುಂಬಗಳಿಗೆ ಈ ವ್ಯವಸ್ಥೆ ಕಲ್ಪಿಸಲಾಗುವುದು’

TRENDING