Tuesday, January 26, 2021
Home ಸುದ್ದಿ ಜಾಲ ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್: ಪ್ರೋತ್ಸಾಹ ಧನ ಹೆಚ್ಚಳ ಸಾಧ್ಯತೆ

ಇದೀಗ ಬಂದ ಸುದ್ದಿ

ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್: ಪ್ರೋತ್ಸಾಹ ಧನ ಹೆಚ್ಚಳ ಸಾಧ್ಯತೆ

ಬೆಂಗಳೂರು: ಸಂಕ್ರಾಂತಿ ನಂತರ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಹೆಚ್ಚಳಕ್ಕೆ ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟ ಚಿಂತನೆ ನಡೆಸಿದೆ. ಪ್ರತಿ ಲೀಟರ್ ಹಾಲಿಗೆ ಒಂದು ರೂಪಾಯಿ ಪ್ರೋತ್ಸಾಹ ಧನ ಹೆಚ್ಚಳ ಮಾಡಲು ಚಿಂತನೆ ನಡೆಸಲಾಗಿದೆ.

ಒಕ್ಕೂಟದಿಂದ ಪ್ರತಿ ಲೀಟರ್ ಹಾಲಿಗೆ 25.30 ರೂ. ನೀಡಲಾಗುತ್ತಿದೆ. ಇದರಲ್ಲಿ 24 ಹಾಲು ಉತ್ಪಾದಕರಿಗೆ ಮತ್ತು 1.30 ರೂ. ಸೊಸೈಟಿಗೆ ಬರುತ್ತದೆ. ಸಂಕ್ರಾಂತಿ ನಂತರ ಹಾಲು ಉತ್ಪಾದಕರಿಗೆ ಒಂದು ರೂಪಾಯಿ ಹೆಚ್ಚಳವಾಗಲಿದ್ದು, ಪ್ರತಿ ಲೀಟರ್ ಹಾಲಿಗೆ 26.30 ರೂ. ಸಿಗಲಿದೆ.

ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟದ ವ್ಯಾಪ್ತಿಯ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯ ವ್ಯಾಪ್ತಿಯಲ್ಲಿರುವ 1.5 ಲಕ್ಷಕ್ಕೂ ಅಧಿಕ ಹಾಲು ಉತ್ಪಾದಕರು ಇದರ ಪ್ರಯೋಜನ ಪಡೆಯಲಿದ್ದಾರೆ. ಒಂದು ರೂಪಾಯಿ ಪ್ರೋತ್ಸಾಹ ಧನ ಹೆಚ್ಚಳ ಮಾಡುವುದರಿಂದ ತಿಂಗಳಿಗೆ 4.95 ಕೋಟಿ ರೂಪಾಯಿ ಹೆಚ್ಚುವರಿ ಹೊರೆಯಾಗಲಿದೆ ಎಂದು ಹೇಳಲಾಗಿದೆ.

ಹಾಲು ಉತ್ಪಾದಕರಿಂದ ಸಂಗ್ರಹಿಸುವ ಪ್ರತಿ ಲೀಟರ್ ಹಾಲಿಗೆ ಒಂದು ರೂಪಾಯಿ ಹೆಚ್ಚಳ ಮಾಡುವ ಕುರಿತು ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟ ಈಗಾಗಲೇ ಚಿಂತನೆ ನಡೆಸಿದ್ದು ಸಂಕ್ರಾಂತಿ ನಂತರ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ಎನ್ನಲಾಗಿದೆ.

TRENDING