Monday, January 25, 2021
Home ರಾಜ್ಯ ರಾಜ್ಯದ ಸಾರಿಗೆ ಇಲಾಖೆಯಿಂದ ಗ್ರಾಮೀಣಾ ಜನತೆಗೆ ಭರ್ಜರಿ ಸಿಹಿಸುದ್ದಿ

ಇದೀಗ ಬಂದ ಸುದ್ದಿ

ರಾಜ್ಯದ ಸಾರಿಗೆ ಇಲಾಖೆಯಿಂದ ಗ್ರಾಮೀಣಾ ಜನತೆಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ರಾಜ್ಯದ ಸಾರಿಗೆ ಇಲಾಖೆಯು ಗ್ರಾಮೀಣಾ ಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಬೆಂಗಳೂರಿನಿಂದ 100 ಕಿ.ಮೀ ವ್ಯಾಪ್ತಿಯೊಳಗಿರುವ ಜಿಲ್ಲೆಗಳಿಗೆ ಎಲೆಕ್ಟ್ರಾನಿಕ್ ಬಸ್ ಸಂಚಾರ ಆರಂಭಿಸಲು ನಿರ್ಧರಿಸಿದೆ ಎನ್ನಲಾಗಿದೆ.

ಸಾರಿಗೆ ಇಲಾಖೆಯು ಬೆಂಗಳೂರಿನ 100 ಕಿ.ಮೀ. ವ್ಯಾಪ್ತಿಯೊಳಗೆ ಬರುವ ಜಿಲ್ಲೆಗಳಿಗೆ ಎಲೆಕ್ಟ್ರಾನಿಕ್ ಬಸ್ ಸಂಚಾರ ವಿಸ್ತರಿಸಲು ಮುಂದಾಗಿದ್ದು, ಬೆಂಗಳೂರಿನಿಂದ ಗ್ರಾಮಾಂತರದ ದೊಡ್ಡಬಳ್ಳಾಪುರ, ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೂ ಬಸ್ ಸಂಚಾರ ಆರಂಭಿಸಲು ಮುಂದಾಗಿದೆ.

ರಾಜ್ಯಕ್ಕೆ ಲಭಿಸಲಿರುವ 400 ಬಸ್ ಗಳ ಪೈಕಿ 300 ಬಸ್ ಗಳು ಬೆಂಗಳೂರಿನಲ್ಲಿ ಸಂಚರಿಸಲಿದ್ದು, 50 ಹುಬ್ಬಳ್ಳಿ ಧಾರವಾಮ 50 ಹೊರ ಜಿಲ್ಲೆಗಳಿಗೆ ಸಂಚರಿಸಲಿವೆ. ಇಂತಹ ಎಲೆಕ್ಟ್ರಾನಿಕ್ ಬಸ್ ಗಳು ಬೆಂಗಳೂರಿನ 100 ಕಿ.ಮೀ ವ್ಯಾಪ್ತಿಯೊಳಗಿನ ಜಿಲ್ಲೆಗಳಲ್ಲೂ ಸಂಚಾರ ಆರಂಭಿಸಲಿವೆ ಎಂದು ಹೇಳಲಾಗುತ್ತಿದೆ.

TRENDING