Sunday, January 24, 2021
Home ಸುದ್ದಿ ಜಾಲ ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ

ಇದೀಗ ಬಂದ ಸುದ್ದಿ

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ

 ಕೊಪ್ಪಳ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೃಷಿ ಇಲಾಖೆಯ ಮಹತ್ವಾಕಾಂಕ್ಷಿಯ ರೈತರಿಗೆ ಗುರುತಿನ ಚೀಟಿ ನೀಡುವ ಸ್ವಾಭಿಮಾನಿ ರೈತರ ಕಾರ್ಡ್ ಹಾಗೂ ಕೃಷಿ ಸಂಜೀವಿನಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

ಸ್ವಾಭಿಮಾನಿ ರೈತರ ಗುರುತಿನ ಚೀಟಿ ರೈತರಿಗೆ ನೀಡುವ ಡಿಜಿಟಲ್ ಐಡಿ ಕಾರ್ಡ್ ಆಗಿದ್ದು, ಕೃಷಿ ಸಾಲ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ರೈತರಿಗೆ ಆಗುತ್ತಿರುವ ಸಮಸ್ಯೆಯನ್ನು ಕಡಿಮೆ ಮಾಡಲಿದೆ.

ದೇಶದಲ್ಲೇ ಮೊದಲ ಬಾರಿಗೆ ಇಂಥ ಐಡಿ ಕಾರ್ಡ್ ಅನ್ನು ಕೊಪ್ಪಳದಲ್ಲಿ ವಿತರಣೆ ಮಾಡಲಾಗುತ್ತದೆ. ನಂತರ ಈ ಯೋಜನೆಯನ್ನು ರಾಜ್ಯಾದ್ಯಾಂತ ವಿಸ್ತರಿಸುವ ಉದ್ದೇಶವನ್ನು ಹೊಂದಲಾಗಿದೆ.

TRENDING