Tuesday, January 26, 2021
Home ರಾಜ್ಯ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್

ಇದೀಗ ಬಂದ ಸುದ್ದಿ

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್

ಬೆಂಗಳೂರು: ಶಿಕ್ಷಕರ ಬಹು ದಿನಗಳ ಬೇಡಿಕೆಯಾಗಿದ್ದ ವರ್ಗಾವಣೆಗೆ ಕಾಲ ಕೂಡಿ ಬಂದಂತಿಲ್ಲ. ಹೆಚ್ಚುವರಿ ಮತ್ತು ಕಡ್ಡಾಯ ವರ್ಗಾವಣೆಯಾಗಿದ್ದ ಶಿಕ್ಷಕರ ವರ್ಗಾವಣೆಗೆ ಕೆಎಟಿ ತಡೆ ನೀಡಿದೆ.

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ(ಶಿಕ್ಷಕರ ವರ್ಗಾವಣೆ) ಅಧಿನಿಯಮ -2020 ರ ಅನ್ವಯ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಸಲು ಕೆಎಟಿ ಆದೇಶ ಹೊರಡಿಸಿದೆ. ಇದರಿಂದಾಗಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಯಾಗಿದ್ದ ಶಿಕ್ಷಕರಿಗೆ ವರ್ಗಾವಣೆ ನೀಡಲು ಮುಂದಾಗಿದ್ದ ಶಿಕ್ಷಣ ಇಲಾಖೆಗೆ ಹಿನ್ನಡೆಯಾದಂತಾಗಿದೆ.

ಫೆಬ್ರವರಿ 17 ರವರೆಗೆ ವರ್ಗಾವಣೆ ಪ್ರಕ್ರಿಯೆ ನಡೆಸದಂತೆ ಕೆಎಟಿ ಕಲಬುರ್ಗಿ ಪೀಠ ಆದೇಶ ನೀಡಿದ್ದು, ಈ ಬಾರಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯುವುದು ಅನುಮಾನ ಎನ್ನಲಾಗಿದೆ. ಸರ್ಕಾರ ಶಿಕ್ಷಕರ ವರ್ಗಾವಣೆಗೆ ಮಾರ್ಗಸೂಚಿ ಹೊರಡಿಸಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಸುಮಾರು 75 ಸಾವಿರ ಶಿಕ್ಷಕರ ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ವರ್ಗಾವಣೆ ನಡೆಸದಂತೆ ಕೆಎಟಿ ತೀರ್ಪು ನೀಡಿದ್ದು ಈ ಸಂಬಂಧ ಕಾನೂನು ತಜ್ಞರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲು ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ಹೇಳಲಾಗಿದೆ.

TRENDING