Tuesday, January 19, 2021
Home ದೆಹಲಿ ಕೊರೊನಾ ಲಸಿಕೆ ವಿತರಣೆ : ಇಂದು ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಪಿಎಂ ಸಭೆ

ಇದೀಗ ಬಂದ ಸುದ್ದಿ

ಕೊರೊನಾ ಲಸಿಕೆ ವಿತರಣೆ : ಇಂದು ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಪಿಎಂ ಸಭೆ

ನವದೆಹಲಿ : ಕೊರೊನಾ ಲಸಿಕೆ ವಿತರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ.

ಇಂದು ಸಂಜೆ 4 ಗಂಟೆಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದು, ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜನವರಿ 16ರಿಂದ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ವಿತರಣೆ ಆರಂಭಿಸಲಾಗುವುದು.ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಮೊದಲ ಹಂತದಲ್ಲಿ 3 ಕೋಟಿ ಆರೋಗ್ಯ ಸೇವೆ ಮತ್ತು ಮುಂಜೂಣಿ ಕಾರ್ಯಕರ್ತರಿಗೆ ಕೊರೊನಾ ವೈರಸ್ ಲಸಿಕೆ ವಿತರಣೆ ಮಾಡಲಾಗುವುದು ಬಳಿಕ 50 ವರ್ಷದೊಳಗಿನ 27 ಕೋಟಿ ಜನರಿಗೆ ಆದ್ಯತೆ ಮೇರೆಗೆ ಲಸಿಕೆ ವಿತರಣೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ

TRENDING