Tuesday, January 19, 2021
Home ರಾಜ್ಯ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ 7 ಶಾಸಕರಿಗೆ ಮಂತ್ರಿ ಸ್ಥಾನ ಸಿಗಲಿದೆ : ಶ್ರೀರಾಮುಲು

ಇದೀಗ ಬಂದ ಸುದ್ದಿ

ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ 7 ಶಾಸಕರಿಗೆ ಮಂತ್ರಿ ಸ್ಥಾನ ಸಿಗಲಿದೆ : ಶ್ರೀರಾಮುಲು

 ಬೆಂಗಳೂರುಪಕ್ಷದ ಹೈಕಮಾಂಡ್ ನಿರ್ದೇಶನದ ಮೇರೆಗೆ ಸಂಕ್ರಾಂತಿಯ ನಂತರ ಏಳು ಶಾಸಕರಿಗೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಸಚಿವ ಸ್ಥಾನ ನೀಡಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಅವರು ಟ್ವಿಟರ್​ ಮೂಲಕ ತಿಳಿಸಿದ್ದಾರೆ.

ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಆದರೆ ಸುಖಾಸುಮ್ಮನೆ ಸಿದ್ದರಾಮಯ್ಯನವರು ಯಡಿಯೂರಪ್ಪನವರ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಮೊದಲು ಅವರು ತಮ್ಮ ಪಕ್ಷದ ಒಳಜಗಳ ಸರಿಪಡಿಸಲಿ ಎಂದಿದ್ದಾರೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಆಗಲಿದೆ ಎಂದು ಹೇಳುತ್ತಿರುವ ಬೆನ್ನಲ್ಲೇ ಸಚಿವ ಬಿ. ಶ್ರೀರಾಮುಲು ಅವರು ಪ್ರತಿಕ್ರಿಯೆ ನೀಡಿದ್ದಾರೆ.

TRENDING