Saturday, January 16, 2021
Home ಕೋವಿಡ್-19 ರಾಜ್ಯದಲ್ಲಿಂದು 751 ಪಾಸಿಟಿವ್ ಕೇಸ್ ದಾಖಲು : 5 ಸಾವು

ಇದೀಗ ಬಂದ ಸುದ್ದಿ

ರಾಜ್ಯದಲ್ಲಿಂದು 751 ಪಾಸಿಟಿವ್ ಕೇಸ್ ದಾಖಲು : 5 ಸಾವು

ಬೆಂಗಳೂರು : ಕರ್ನಾಟಕದಲ್ಲಿ ಇಂದು 751 ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 928806 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 384 ಪ್ರಕರಣ ಪತ್ತೆಯಾಗಿದೆ.

ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಸೋಂಕಿಗೆ 5 ಮಂದಿ ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 12149 ಕ್ಕೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ ಇಂದು 2 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 4350 ಕ್ಕೆ ಏರಿಕೆಯಾಗಿದೆ.

ಕರ್ನಾಟಕದಲ್ಲಿ ಇಂದು 1183 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 907729 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಐಸಿಯುನಲ್ಲಿ 203 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

TRENDING