Saturday, January 16, 2021
Home ಕೋವಿಡ್-19 ದೇಶದಲ್ಲಿ ಒಂದೇ ದಿನ 12,584 ಕೊರೋನಾ ಪ್ರಕರಣಗಳು ಪತ್ತೆ, 167 ಮಂದಿ ಬಲಿ

ಇದೀಗ ಬಂದ ಸುದ್ದಿ

ದೇಶದಲ್ಲಿ ಒಂದೇ ದಿನ 12,584 ಕೊರೋನಾ ಪ್ರಕರಣಗಳು ಪತ್ತೆ, 167 ಮಂದಿ ಬಲಿ

ನವದೆಹಲಿ: ಭಾರತದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 12,584 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 167 ಮಂದಿ ಸಾವನ್ನಪ್ಪಿದ್ದಾರೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ.

ಒಂದು ದಿನದಲ್ಲಿ 12,584 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 1,04,79,179ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 1,51,327ಕ್ಕೆ ತಲುಪಿದೆ.

ಈ ನಡುವೆ ನಿನ್ನೆ ಒಂದೇ ದಿನ 18,385 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಇದರೊಂದಿಗೆ ಗುಣಮುಖರಾದವರ ಸಂಖ್ಯೆ 1,01,11,294 ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,16,558ಕ್ಕೆ ಇಳಿಕೆಯಾಗಿದೆ.

ಇನ್ನು ಭಾರತದಲ್ಲಿ ಒಂದೇ ದಿನ 6,59,209 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 18,17,55,831 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀ.ಡಿದೆ

TRENDING