Tuesday, January 26, 2021
Home ರಾಜ್ಯ ದಕ್ಷಿಣ ಒಳನಾಡು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ

ಇದೀಗ ಬಂದ ಸುದ್ದಿ

ದಕ್ಷಿಣ ಒಳನಾಡು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ

ಬೆಂಗಳೂರು, ಜ. 12: ದಕ್ಷಿಣ ಒಳನಾಡು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರಿನ ಅಲ್ಲಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆಯಾಗುವ ಸಾಧ್ಯತೆ ಇದೆ. 25 ಡಿಗ್ರಿ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡು, ಕರಾವಳಿ ಭಾಗದ ಕೆಲವೆಡೆ ಮಳೆಯಾಗಲಿದೆ, ಇನ್ನುಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಬೀದರ್‌ನಲ್ಲಿ 12.2 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಜನವರಿ 14ರ ಬಳಿಕ ದಕ್ಷಿಣ ಒಳನಾಡು, ಕರ್ನಾಟಕ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ರಾಜ್ಯಾದ್ಯಂತ ಮಳೆ ಬಂದಿರುವ ಕಾರಣ ಚಳಿಯೂ ಕೂಡ ಗಣನೀಯವಾಗಿ ಕಡಿಮೆಯಾಗಿದೆ.

TRENDING