Wednesday, January 27, 2021
Home ಬೆಂಗಳೂರು ಬೆಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ ವಿಧಿವಶ

ಇದೀಗ ಬಂದ ಸುದ್ದಿ

ಬೆಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ ವಿಧಿವಶ

ಬೆಂಗಳೂರು: ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಹರ್ಷಾನಂದಜೀ (91) ಅವರು ಹೃದಯಾಘಾತದಿಂದ ಇಂದು ಮಧ್ಯಾಹ್ನ ವಿಧಿವಶರಾಗಿದ್ದಾರೆ.

ಬಸವನಗುಡಿಯಲ್ಲಿರುವ ರಾಮಕೃಷ್ಣಾಶ್ರಮದ ಅಧ್ಯಕ್ಷರಾಗಿದ್ದ ಅವರಿಗೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿ ಕೊನೆಯುಸಿರೆಳೆದರು ಎಂದು ಮಠದ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.

ರಾಮಕೃಷ್ಣ ಆಶ್ರಮದ ವಿದ್ಯಾಥಿ ಮಂದಿರದಲ್ಲಿ ಇಂದು ರಾತ್ರಿ 8 ಗಂಟೆವರೆಗೆ ಹಾಗೂ ನಾಳೆ ಬೆಳಗ್ಗೆ 6ರಿಂದ ಮಧ್ಯಾಹ್ನ 12 ಗಂಟೆವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಶ್ರೀ ವಿಷ್ಣುಮಯಾನಂದ ಸ್ವಾಮೀಜಿ ತಿಳಿಸಿದ್ದಾರೆ. ಶ್ರೀಗಳ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

TRENDING