Saturday, January 16, 2021
Home ಅಂತರ್ ರಾಜ್ಯ ಕೇಂದ್ರ ಆಯುಷ್ ಮಂತ್ರಿ ಶ್ರೀಪಾದ ನಾಯ್ಕ ಅವರ ಆರೋಗ್ಯ ಸದ್ಯ ಸ್ಥಿರ

ಇದೀಗ ಬಂದ ಸುದ್ದಿ

ಕೇಂದ್ರ ಆಯುಷ್ ಮಂತ್ರಿ ಶ್ರೀಪಾದ ನಾಯ್ಕ ಅವರ ಆರೋಗ್ಯ ಸದ್ಯ ಸ್ಥಿರ

ಪಣಜಿ: ಕೇಂದ್ರ ಆಯುಷ್ ಮಂತ್ರಿ ಶ್ರೀಪಾದ ನಾಯ್ಕ ರವರ ಆರೋಗ್ಯ ಸದ್ಯ ಸ್ಥಿರವಾಗಿದೆ. ಗೋವಾ ಬಾಂಬೋಲಿಂ ಆಸ್ಪತ್ರೆಯ ವೈದ್ಯರೊಂದಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯರ ತಂಡ ಸತತವಾಗಿ ಸಂಪರ್ಕದಲ್ಲಿದ್ದು, ಅಗತ್ಯವಿರುವ ಎಲ್ಲ ಚಿಕಿತ್ಸೆಯನ್ನೂ ಅವರ ಮಾರ್ಗದರ್ಶನದಲ್ಲಿ ಗೋವಾದಲ್ಲಿಯೇ ನೀಡಲಿದ್ದಾರೆ. ಅಗತ್ಯಬಿದ್ದರೆ ಅವರನ್ನು ದೆಹಲಿಗೆ ಕರೆದೊಯ್ಯಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿದರು.

ಮಂಗಳವಾರ ಮಧ್ಯಾಹ್ನ ದೆಹಲಿಯಿಂದ ಗೋವಾಕ್ಕೆ ಆಗಮಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರವರು ಬಾಂಬೋಲಿಂ ಆಸ್ಪತ್ರೆಗೆ ತೆರಳಿ ಶ್ರೀಪಾದ ನಾಯ್ಕ ರವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಶ್ರೀಪಾದ ನಾಯ್ಕ ಅವರ ಆರೋಗ್ಯ ಸದ್ಯ ಸ್ಥಿರವಾಗಿದೆ. ಶ್ರೀಪಾದ ನಾಯ್ಕ ರವರಿಗೆ ಗೋವಾ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರೆಯಲಿದೆ. ಇಲ್ಲಿನ ವೈದ್ಯರು ಸಮಯಕ್ಕೆ ತಕ್ಕಂತೆಯೇ ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತಿದ್ದಾರೆ, ಇದಕ್ಕೆ ಬಾಂಬೋಲಿಂ ವೈದ್ಯರ ತಂಡಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ಶ್ರೀಪಾದ ನಾಯ್ಕ ರವರನ್ನು ದೆಹಲಿಗೆ ಏರ್ ಲಿಫ್ಟ್ ಮಾಡುವ ಅಗತ್ಯವಿಲ್ಲ ಎಂದು ಅನ್ನಿಸುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

TRENDING