Thursday, January 21, 2021
Home ರಾಜ್ಯ ರಾಜ್ಯ ಸರ್ಕಾರದಿಂದ ಗ್ರಾಮೀಣಾ ಜನತೆಗೆ ಮತ್ತೊಂದು ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ರಾಜ್ಯ ಸರ್ಕಾರದಿಂದ ಗ್ರಾಮೀಣಾ ಜನತೆಗೆ ಮತ್ತೊಂದು ಗುಡ್ ನ್ಯೂಸ್

ದಾವಣಗೆರೆ : ರಾಜ್ಯ ಸರ್ಕಾರವು ಗ್ರಾಮಪಂಚಾಯಿತಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದ್ದು, ಬಿ.ಎಸ್. ಯಡಿಯೂರಪ್ಪ ಅಧಿಕಾರವಧಿಯಲ್ಲಿ ಜಾರಿಗೆ ತಂದಿದ್ದ ಸುವರ್ಣ ಗ್ರಾಮ ಯೋಜನೆಯನ್ನು ರಾಜ್ಯದಲ್ಲಿ ಮತ್ತೆ ಜಾರಿಗೆ ತಂದು ಗ್ರಾ.ಪಂ ಅಭಿವೃದ್ಧಿಗೆ ಒಂದು ಕೋಟಿ ರೂ.ಅನುದಾನ ನೀಡಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಸುವರ್ಣ ಗ್ರಾಮ ಯೋಜನೆ ಜಾರಿಗೊಳಿಸಲಾಗುವುದು. ಈ ಯೋಜನೆ ಮೂಲಕ ಪ್ರತಿ ಗ್ರಾಮಪಂಚಾಯಿತಿಗೆ ಒಂದು ಕೋಟಿ ರೂ.ಅನುದಾನ ನೀಡಲಾಗುವುದು ಎಂದು ಹೇಳಿದರು.

ಬಿ.ಎಸ್. ಯಡಿಯೂರಪ್ಪ ಅಧಿಕಾರವಧಿಯಲ್ಲಿ ಸುವರ್ಣಗ್ರಾಮ ಯೋಜನೆ ಜಾರಿಗೆ ತರಲಾಗಿತ್ತು. ಕಾಂಗ್ರೆಸ್ ಸರ್ಕಾರ ಯೋಜನೆ ರದ್ದುಪಡಿಸಿ ಗ್ರಾಮವಿಕಾಸ್ ಯೋಜನೆ ಜಾರಿಗೆ ತಂದಿದ್ದರು. ಆದರೆ ಹಳ್ಳಿಗಳ ಅಭಿವೃದ್ಧಿ ಮಾತ್ರ ಆಗಲಿಲ್ಲ. ಹಾಗಾಗಿ ಸುವರ್ಣ ಗ್ರಾಮ ಯೋಜನೆ ಮತ್ತೆ ಜಾರಿಗೊಳಿಸಲಾಗುವುದು ಎಂದರು.

TRENDING