Thursday, July 29, 2021
Homeಕೋವಿಡ್-19ರಾಜ್ಯದ 243 ಕಡೆ ಕೊರೊನಾ ಲಸಿಕೆ ವಿತರಣೆ

ಇದೀಗ ಬಂದ ಸುದ್ದಿ

ರಾಜ್ಯದ 243 ಕಡೆ ಕೊರೊನಾ ಲಸಿಕೆ ವಿತರಣೆ

ಬೆಂಗಳೂರು: ರಾಜ್ಯದ 243 ಕಡೆಗಳಲ್ಲಿ ಶನಿವಾರ (ಜನವರಿ 16) ಕೊರೊನಾ ಲಸಿಕೆ ನೀಡುತ್ತಿದ್ದು, ಬೆಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಸೇರಿದಂತೆ 10 ಕಡೆಗಳಲ್ಲಿ ಲಸಿಕೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯ ವಿಕ್ಟೋರಿಯಾ ಆಸ್ಪತ್ರೆ, ಕೆಸಿ ಜನರಲ್ ಆಸ್ಪತ್ರೆ, ಸಿವಿ ರಾಮನ್ ನಗರದ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಒಟ್ಟು 8 ಆಸ್ಪತ್ರೆಗಳಲ್ಲಿ ಮೊದಲ ಹಂತದಲ್ಲಿ ಕೋವಿಡ್ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಜ,16ರಂದು ಬೆಳಿಗ್ಗೆ 10.30ಕ್ಕೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಯವರು ಚಾಲನೆ ನೀಡುತ್ತಿದ್ದು, ಪಾಲಿಕೆ ವ್ಯಾಪ್ತಿಯ ವಿಕ್ಟೋರಿಯಾ ಆಸ್ಪತ್ರೆ, ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜು, ಮಲ್ಲಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರ, ಈಸ್ಟ್ ಪಾಯಿಂಟ್ ವೈದ್ಯಕೀಯ ಕಾಲೇಜು, ಯಲಹಂಕದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ತಲಾ 100 ಮಂದಿಗೆ ಲಸಿಕೆ ನೀಡಲಾಗುತ್ತೆದ ಎಂದು ಬಿಬಿಎಂಪಿ ವಿಶೇಷ ಆಯುಕ್ತರು ಮಾಹಿತಿ ನೀಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img