Tuesday, March 9, 2021
Home ಸಿನಿಮಾ BREAKING NEWS:ಕನ್ನಡ ಚಿತ್ರರಂಗದ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ-ಶೇ. 100 ಪ್ರೇಕ್ಷಕರಿಗೆ ಅವಕಾಶ

ಇದೀಗ ಬಂದ ಸುದ್ದಿ

BREAKING NEWS:ಕನ್ನಡ ಚಿತ್ರರಂಗದ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ-ಶೇ. 100 ಪ್ರೇಕ್ಷಕರಿಗೆ ಅವಕಾಶ

ಬೆಂಗಳೂರು: ಕನ್ನಡ ಚಿತ್ರರಂಗದ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬದಲಿಸಿದ್ದು, ಚಿತ್ರಮಂದಿರದಲ್ಲಿ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಲಾಗಿದೆ.

ಶೇಕಡ 100 ರಷ್ಟು ಅವಕಾಶ ಕಲ್ಪಿಸಲು ಮಾರ್ಗಸೂಚಿ ರಚಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆನ್ನಲಾಗಿದೆ. ನಿನ್ನೆ ರಾತ್ರಿ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ ಕೊರೊನಾ ಎರಡನೇ ಕಾರಣ ಫೆಬ್ರವರಿ 28 ರವರೆಗೆ ಚಿತ್ರಮಂದಿರಗಳಲ್ಲಿ ಶೇಕಡ 50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವಂತೆ ಸೂಚಿಸಿತ್ತು.

ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಿದ್ದರೂ ರಾಜ್ಯದಲ್ಲಿ ಶೇಕಡ 50 ರಷ್ಟು ಮಾತ್ರ ಅವಕಾಶ ನೀಡಿದ್ದಕ್ಕೆ ಕನ್ನಡ ಚಿತ್ರರಂಗದಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

TRENDING