Tuesday, April 13, 2021
Home ಕೋವಿಡ್-19 ರಾಜ್ಯದಲ್ಲಿ ಇಂದು 415 ಕೊರೊನಾ ಪಾಸಿಟಿವ್ ಕೇಸ್ ಪತ್ತೆ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಇಂದು 415 ಕೊರೊನಾ ಪಾಸಿಟಿವ್ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಸದ್ಯ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ,  ಇಂದು ರಾಜ್ಯದಲ್ಲಿ 415 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. .ಈ ಮೂಲಕ ಸೋಂಕಿತರ ಸಂಖ್ಯೆ 9,43,627 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಕಿಲ್ಲರ್ ಕೊರೊನಾ ಸೋಂಕಿಗೆ ಮೂವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,244 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಇಂದು 322 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,25,489 ಕ್ಕೆ ಏರಿಕೆಯಾಗಿದೆ. ಇನ್ನು 5,875 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 141 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಇಂದು 208 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 4,01095 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಮೂವರು ಜನ ಕೊರೊನಾ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

TRENDING