ಚಂಡೀಘಡ : ಗಂಡು ಮಗು ಹುಟ್ಟಿದ್ದಕ್ಕೆ ತನ್ನ ನಾಲ್ಕು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ಪಾಪಿ ತಾಯಿಯೊಬ್ಬಳು ತಾನು ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ನಡೆದಿದೆ.
ಈ ಅಮಾನವೀಯ ಘಟನೆ ಹರಿಯಾಣದ ನುಹ್ ಜಿಲ್ಲೆಯಲ್ಲಿ ನಡೆದಿದೆ. ಕೃತ್ಯಕ್ಕೆ ಕಾರಣವಾಗಿರುವ ತಾಯಿಯನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ 2020ರಲ್ಲಿಯೇ ನಡೆದಿತ್ತು.
ಪತಿ ಸಂಬಂಧಿಕರ ಅಂತ್ಯಸಂಸ್ಕಾರದ ಕಾರ್ಯಕ್ರಮಕ್ಕೆಂದು ತೆರಳಿದ್ದ ಸಂದರ್ಭದಲ್ಲಿ ಪತ್ನಿ ಈ ಕೃತ್ಯ ಎಸಗಿದ್ದಾಳೆ. ಪಾಪಿ ಮಹಿಳೆ ತನ್ನ 1, 3, 4 ಹಾಗೂ 6 ವರ್ಷದ ಹೆಣ್ಣು ಮಕ್ಕಳ ಗಂಟಲಿಗೆ ಚಾಕು ಹಾಕಿ ಕೊಲೆ ಮಾಡಿದ್ದಾಳೆ. ಆ ನಂತರ ಮಕ್ಕಳನ್ನು ಅಲ್ಲಿಯೇ ಎಸೆದು, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪತಿ ಮನೆಗೆ ಮರಳಿ ಬರುತ್ತಿದ್ದಂತೆ, ಮಕ್ಕಳು ಸತ್ತು ಬಿದ್ದಿದ್ದರು. ಪತ್ನಿ ಸಾವು – ಬದುಕಿನ ಮಧ್ಯೆ ಹೋರಾಟ ನಡೆಸಿದ್ದಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿಯವರೆಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ, ಈಗ ತಪ್ಪೊಪ್ಪಿಕೊಂಡಿದ್ದಾಳೆ. ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.