Tuesday, April 13, 2021
Home ಜಿಲ್ಲೆ ಮೈಸೂರು ಮೈಸೂರಿನ ಮಹಾರಾಜ ಕಾಲೇಜಿನ ಮೇಲ್ಛಾವಣಿ ಕುಸಿತ : ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಇದೀಗ ಬಂದ ಸುದ್ದಿ

ಮೈಸೂರಿನ ಮಹಾರಾಜ ಕಾಲೇಜಿನ ಮೇಲ್ಛಾವಣಿ ಕುಸಿತ : ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

 ಮೈಸೂರುಶತಮಾನದಷ್ಟು ಹಳೆಯದಾದ ಮೈಸೂರಿನ ಮಹಾರಾಜ ಕಾಲೇಜಿನ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡ ವಿದ್ಯಾರ್ಥಿಗಳನ್ನು ವಿಶಾಲ್‌, ಯಶವಂತ್‌ ಹಾಗೂ ಸಲೀಂ ಎಂದು ಗುರುತಿಸಲಾಗಿದ್ದು, ಅವರ ತಲೆ ಹಾಗೂ ಮುಖಕ್ಕೆ ಪೆಟ್ಟು ಬಿದ್ದಿದೆ. ಗಾಯಾಳು ವಿದ್ಯಾರ್ಥಿಗಳನ್ನು ಕಾಮಾಕ್ಷಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬ ವಿದ್ಯಾರ್ಥಿಯ ತಲೆಗೆ ಗಂಭೀರ ಪೆಟ್ಟಾಗಿದ್ದು, ವೈದ್ಯರು ಹೊಲಿಗೆ ಹಾಕಿದ್ದಾರೆ.

ಮೈಸೂರು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಆರ್‌.ಶಿವಪ್ಪ, ಕಾಲೇಜಿನ ಪ್ರಾಂಶುಪಾಲರಾದ ಅನಿತಾ ಹಾಗೂ ಉಪನ್ಯಾಸಕರು ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.

ಇಂದು ಬೆಳಗ್ಗೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾಗ ಈ ದುರಂತ ಸಂಭವಿಸಿದೆ. ಕಟ್ಟಡದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದು, ಇದರಿಂದ ಏಕಾಏಕಿ ಚಾವಣಿಯ ಗಾರೆ ಕಳಚಿ ಬಿದ್ದಿದೆ.

‘ಹಳೇ ಕಟ್ಟಡ ಇದಾಗಿದ್ದು, ಬೇರೆ ಕಡೆ ತರಗತಿಗಳನ್ನು ನಡೆಸಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳಿಗೆ ಕಾಲೇಜು ವತಿಯಿಂದಲೇ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಾವುದೇ ತೊಂದರೆ ಇಲ್ಲ. ವಿದ್ಯಾರ್ಥಿಗಳ ಪೋಷಕರು ಕೂಡ ಬಂದಿದ್ದಾರೆ. ನಮ್ಮ ಸಿಬ್ಬಂದಿ ಕೂಡ ಆಸ್ಪತ್ರೆಯಲ್ಲೇ ಇದ್ದು ಕಾಳಜಿ ವಹಿಸುತ್ತಿದ್ದಾರೆ’ ಎಂದು ಪ್ರೊ.ಆರ್‌.ಶಿವಪ್ಪ ಹೇಳಿದ್ದಾರೆ.

TRENDING