Tuesday, April 13, 2021
Home ಸುದ್ದಿ ಜಾಲ ರಾಮ ಮಂದಿರ ನಿರ್ಮಾಣದ ನಿಧಿಯಲ್ಲಿ ಸಂಗ್ರಹವಾದ ಹಣವೆಷ್ಟು ಗೊತ್ತಾ..? ಇಲ್ಲಿದೆ ನೋಡಿ ಮಾಹಿತಿ

ಇದೀಗ ಬಂದ ಸುದ್ದಿ

ರಾಮ ಮಂದಿರ ನಿರ್ಮಾಣದ ನಿಧಿಯಲ್ಲಿ ಸಂಗ್ರಹವಾದ ಹಣವೆಷ್ಟು ಗೊತ್ತಾ..? ಇಲ್ಲಿದೆ ನೋಡಿ ಮಾಹಿತಿ

ನವದೆಹಲಿ: ಅಯೋಧ್ಯೆ ಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸುವ ಅಭಿಯಾನಕ್ಕೆ ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

ಸದ್ಯ ನಿಧಿಯಲ್ಲಿ 1000 ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ., ಈ ಕುರಿತು ಮಾಹಿತಿ ನೀಡಿರುವ ಅವರು ಈ ನಿಧಿ ಸಂಗ್ರಹಣೆಯ ಅಭಿಯಾನವನ್ನ ನಾವು ದಕ್ಷಿಣ ಭಾರತದಾದ್ಯಂತ ಸಂಚರಿಸಿದ್ದೇವೆ, ನಾಡಿನ ಪ್ರಥಮ ಪ್ರಜೆಗಳಿಂದ ಹಿಡಿದು ಜನಸಾಮಾನ್ಯರು ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ ಎಂದರು.

ಫೆಬ್ರವರಿ 27 ರವರೆಗೆ ನಿಧಿ ಸಂಗ್ರಹ ಅಭಿಯಾನ ಮುಂದುವರೆಯಲಿದೆ,ನಾವು ಅಂದುಕೊಂಡಂತೆ ಒಂದೂವರೆ ಸಾವಿರ ಕೋಟಿ ರೂಪಾಯಿ ಗಡಿಯನ್ನು ಶೀಘ್ರವೇ ತಲುಪಿಸುವ ಸಾಧ್ಯತೆ ಇದೆ ಎಂದು ಹೇಳಿದರು. ರಾಮ ಮಂದಿರ ನಿರ್ಮಾಣಕ್ಕಾಗಿ ಜನರು , ನಟರು, ರಾಜಕಾರಣಿಗಳು ದೇಣಿಗೆ ನೀಡುತ್ತಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ರಾಮಮಂದಿರ ನಿರ್ಮಾಣಕ್ಕೆ ಸಿದ್ಧತೆ ಕೆಲಸಗಳು ನಡೆದಿವೆ. ದೇಣಿಗೆ ಸಂಗ್ರಹಕ್ಕೆ ದೇಶದೆಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

TRENDING