Tuesday, April 13, 2021
Home ಕೋವಿಡ್-19 ರಾಜ್ಯದಲ್ಲಿ ಇಂದು 430 ಕೊರೋನಾ ಪ್ರಕರಣ ಪತ್ತೆ, 7 ಮಂದಿ ಬಲಿ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಇಂದು 430 ಕೊರೋನಾ ಪ್ರಕರಣ ಪತ್ತೆ, 7 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಇಂದು 430 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,44,057ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಏಳು ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,251ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 228 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,01,323ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಆರು ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 340 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,25,829ಕ್ಕೆ ಏರಿಕೆಯಾಗಿದೆ. ಇನ್ನು 5,958 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 137 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

TRENDING