Tuesday, April 13, 2021
Home ಸುದ್ದಿ ಜಾಲ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಸಿಹಿಸುದ್ದಿ

ಇದೀಗ ಬಂದ ಸುದ್ದಿ

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಸಿಹಿಸುದ್ದಿ

ಬೆಂಗಳೂರು : ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಜೊಲ್ಲೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಮುಂಬರುವ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರ ಗೌರವಧನ ಹೆಚ್ಚಳ ಮಾಡಲು ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ವೇಳೆ ಮುಂಚೂಣಿಯಲ್ಲಿ ನಿಂತು ಅಂಗನವಾಡಿ ಕಾರ್ಯಕರ್ತೆಯರು ಕೆಲಸ ಮಾಡಿದ್ದಾರೆ. ಹೀಗಾಗಿ ಅವರ ಗೌರವ ಧನ ಹೆಚ್ಚಿಸುವ ಕುರಿತು ಸಿಎಂ ಜೊತೆ ಸಮಾಲೋಚನೆ ನಡೆಸಲಾಗಿದೆ ಎಂದು ಹೇಳಿದರು.

ಇನ್ನು ಅಪೌಷ್ಠಿಕತೆ ನಿವಾರಣೆ, ಗರ್ಭಿಣಿಯರು, ಹಸುಗೂಸುಗಳ ಮರಣ ತಪ್ಪಿಸಲು ಪೌಷ್ಠಿಕಾಂಶಯುಕ್ತ ಅಹಾರ ಒದಗಿಸಲು ಹೊಸ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಸ್ವಸಹಾಯ ಗುಂಪುಗಳಿಗೆ ಅನುಕೂಲವಾಗುವಂತ ಕಾರ್ಯಕ್ರಮ ರೂಪಿಸಲು ಮನವಿ ಮಾಡಲಾಗಿದೆ ಎಂದು ಹೇಳಿದರು.

TRENDING