ಬೆಂಗಳೂರು : ಕಲ್ಯಾಣ ಕರ್ನಾಟಕ ಪ್ರದೇಶದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳಿಗೆಗಾಗಿಯೇ ಬೆಂಗಳೂರು ಎಚ್ ಎಸ್ ಆರ್ ಲೇಔಟ್ ನಲ್ಲಿ ವಸತಿ ನಿಲಯ ವನ್ನು ರಾಜ್ಯ ಸರ್ಕಾರ ಸ್ಥಾಪಿಸಲು ನಿರ್ಧರಿಸಿದೆ.
60 ಕೋಟಿ ರೂ. ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಾಣ ವಾಗಲಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಯೋಜನೆ, ಉಸ್ತುವಾರಿ ಮತ್ತು ಅಂಕಿ-ಅಂಶ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.
ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದು ಕೂಡಲೇ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಸಚಿವರು ತಿಳಿಸಿದರು. ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಪರಿಶೀಲನಾ ಸಭೆಯಲ್ಲಿ ಬುಧವಾರ ಈ ಕುರಿತು ನಿರ್ಣಯ ಕೈಗೊಳ್ಳಲಾಯಿತು.