Saturday, April 17, 2021
Home ಸುದ್ದಿ ಜಾಲ ಬೆಂಗಳೂರು ಸೇರಿ ಹಲವೆಡೆ ಚಿನ್ನದ ಬೆಲೆ ಮತ್ತೆ ಏರಿಕೆ

ಇದೀಗ ಬಂದ ಸುದ್ದಿ

ಬೆಂಗಳೂರು ಸೇರಿ ಹಲವೆಡೆ ಚಿನ್ನದ ಬೆಲೆ ಮತ್ತೆ ಏರಿಕೆ

ಭಾರತದಲ್ಲಿ ಒಂದು ವಾರದಿಂದ ಇಳಿಕೆಯಾಗಿದ್ದ ಚಿನ್ನದ ಬೆಲೆ ಇಂದು ಮತ್ತೆ ಕೊಂಚ ಏರಿಕೆಯಾಗಿದೆ. 3 ದಿನಗಳಿಂದ ಹೆಚ್ಚಳವಾಗುತ್ತಿದ್ದ ಚಿನ್ನದ ದರ ಇಂದು ಮತ್ತೆ ಏರಿಕೆಯಾಗಿದ್ದು, 47 ಸಾವಿರಕ್ಕೆ ಏರಿದೆ. ದೇಶದ ನಾನಾ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 51,000 ರೂ. ದಾಟಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಇಂದು 48,820 ರೂ. ಆಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ ಇಂದು 44,760 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದ್ದು, ನಿನ್ನೆ 70 ಸಾವಿರ ದಾಟಿದ್ದ ಬೆಳ್ಳಿ ಬೆಲೆ ಇಂದು 68 ಸಾವಿರಕ್ಕೆ ಕುಸಿದಿದೆ. ಭಾರತದಲ್ಲಿ 2 ದಿನಗಳ ಹಿಂದೆ 46,360 ರೂ. ಇದ್ದ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಇಂದು 47,020 ರೂ.ಗೆ ಏರಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಇಂದು 48,020 ರೂ.ಗೆ ಏರಿಕೆಯಾಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಇಂದು 48,820 ರೂ. ಆಗಿದೆ. ಹಾಗೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 44,760 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.

ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 51,000 ರೂ. ದಾಟಿದೆ.

ಭಾರತದಲ್ಲಿ ಬೆಳ್ಳಿ ಬೆಲೆ ಇಂದು ಇಳಿಮುಖವಾಗಿದ್ದು, ನಿನ್ನೆ 69 ಸಾವಿರವಿದ್ದ ಬೆಳ್ಳಿ ಬೆಲೆ ಇಂದು 1 ಕೆಜಿಗೆ 68,400 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆಯಲ್ಲಿ ಕೊಂಚ ಏರಿಕೆಯಾಗಿದ್ದು, ಇಂದು 70,300 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 74,300 ರೂ. ದಾಟಿದೆ.

ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.
ಕೊರೋನಾ ವೈರಸ್​ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ.

TRENDING