ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ ಮತ್ತು ಸಹಕಾರ ಹಾಗೂ ಮೈಸೂರು ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ ಅವರ ಜಂಟಿ ಅಧ್ಯಕ್ಷತೆಯಲ್ಲಿ ಗುರುವಾರ ಮಧ್ಯಾಹ್ನ ವಿಕಾಸಸೌಧದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜೆ.ರವಿಶಂಕರ್, ಪೌರಾಡಳಿತ ಇಲಾಖೆ ನಿರ್ದೇಶಕಿ ಶ್ರೀಮತಿ ಬಿ.ಬಿ.ಕಾವೇರಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ.ರಾಜೀವ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಟಿ. ಹೆಚ್.ಎಮ್.ಕುಮಾರ್ ಮೂಡಾ ಆಯುಕ್ತರಾದ ಡಿ.ಬಿ.ನಟೇಶ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.