Saturday, April 17, 2021
Home ಬೆಂಗಳೂರು ರಾಜ್ಯದ ಸರ್ಕಾರಿ ಕಾಲೇಜು ಪ್ರಾಧ್ಯಾಪರಿಗೆ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ರಾಜ್ಯದ ಸರ್ಕಾರಿ ಕಾಲೇಜು ಪ್ರಾಧ್ಯಾಪರಿಗೆ ಗುಡ್ ನ್ಯೂಸ್

 ಬೆಂಗಳೂರು : ರಾಜ್ಯದ ಸರ್ಕಾರಿ ಕಾಲೇಜುಗಳ ಪ್ರಾಧ್ಯಾಪಕರಿಗೆ ಯುಜಿಸಿ ವೇತನ ಹಿಂಬಾಕಿ ಪಾವತಿ, ವರ್ಗಾವಣೆ, ಪ್ರಾಂಶುಪಾಲರ ನೇಮಕ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ಅವರು, ಆದಷ್ಟು ಶೀಘ್ರವೇ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ಈ ಕುರಿತಂತೆ ವಿಧಾನಸೌಧದಲ್ಲಿ ಇಂದು ಕರ್ನಾಟಕ ಸರ್ಕಾರಿ ಕಾಲೇಜುಗಳ ಬೋಧಕರ ಸಂಘದ ಅಧ್ಯಕ್ಷ ಡಾ.ಡಿ.ಎಂ.ಮಂಜುನಾಥ್ ಮತ್ತಿತರೊಂದಿಗೆ ಮಾತುಕತೆ ನಡೆಸಿದಂತ ಅವರು, ರಾಜ್ಯದ ಸರ್ಕಾರಿ ಕಾಲೇಜು ಪ್ರಾಧ್ಯಾಪಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಆದಷ್ಟು ಶೀಘ್ರವೇ ಈಡೇರಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಪ್ರಾಧ್ಯಾಪಕರ ರಾಷ್ಟ್ರೀಯ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರ ಪಾಲು ತುಂಬಲಾಗಿಲ್ಲ. ಈ ಮೊತ್ತವನ್ನು ಕೂಡಲೇ ತುಂಬಲಾಗುತ್ತದೆ. 2006ರ ಯುಜಿಸಿ ವೇತನ ಹಿಂಬಾಕಿ ಮತ್ತು 2019ರ ಏಪ್ರಿಲ್ ತಿಂಗಳಿನಿಂದ ಪಾವತಿಯಾಗಬೇಕಿರುವ ವೇತನ ಕುರಿತು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

TRENDING