Saturday, April 17, 2021
Home ಸುದ್ದಿ ಜಾಲ ಗುಡ್ ನ್ಯೂಸ್ : 3473 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ

ಇದೀಗ ಬಂದ ಸುದ್ದಿ

ಗುಡ್ ನ್ಯೂಸ್ : 3473 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ರಾಜ್ಯದ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು.

3473 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಶಾಲೆಗಳಿಗೆ ಅಗತ್ಯವಿರುವ ಶಿಕ್ಷಕರ ಹುದ್ದೆಗೆ ಶಾಲಾವಾರು ವೃಂದ ಮಂಜೂತಿ ಜಿಲ್ಲಾ ಹಂತದಲ್ಲಿ ನಿಯಮಾನುಸಾರ ಕೈಗೊಳ್ಳಲಾಗಿದೆ.

ಎಲ್ಲೆಲ್ಲಿ ಖಾಲಿ ಹುದ್ದೆಗಳು ಇವೆಯೋ ಅಂತಹ ಸ್ಥಳದಲ್ಲಿ ದೈಹಿಕ ಮತ್ತು ವೃತ್ತಿ ಶಿಕ್ಷಕರನ್ನು ಹೊರತುಪಡಿಸಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಮಾಸಿಕ ಗೌರವ ಸಂಭಾವನೆ 8000 ರೂ. ನೀಡಲಾಗುವುದು ಎಂದು ಹೇಳಲಾಗಿದೆ.

TRENDING