Saturday, April 17, 2021
Home ಸುದ್ದಿ ಜಾಲ 2020-21ನೇ ಸಾಲಿನ ಮೆಟ್ರಿಕ್ ಪೂರ್ವ, ನಂತ್ರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಇದೀಗ ಬಂದ ಸುದ್ದಿ

2020-21ನೇ ಸಾಲಿನ ಮೆಟ್ರಿಕ್ ಪೂರ್ವ, ನಂತ್ರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

 ಬೆಂಗಳೂರು : 2020-21ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಮತ್ತು ಮೆಟ್ರಿಕ್ ನಂತ್ರದ ವಿದ್ಯಾರ್ಥಿ ವೇತನಕ್ಕಾಗಿ ಹೊಸದಾಗಿ ಅರ್ಜಿ ಸಲ್ಲಿಸಲು ಅರ್ಜಿಯನ್ನು ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-03-2021 ಆಗಿರುತ್ತದೆ.

ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲೆಗಳ ಜಂಟಿ, ಉಪ ನಿರ್ದೇಶಕರಿಗೆ ಪತ್ರದಲ್ಲಿ ತಿಳಿಸಿದ್ದು, 2020-21ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅನುಷ್ಠಾನ ಮಾಡಲಾಗುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮತ್ತು ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿ ನವೀನ (Fresh) ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಹಾಗೂ ಮೆಟ್ರಿಕ್ ನಂತ್ರದ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ನವೀನ (Fresh) ಮತ್ತು ನವೀಕರಣ ( Renewal) ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಕೋರಿ ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದೆ.

2019-20ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ 1,09,137 ನವೀನ ( Fresh) ಅರ್ಜಿಗಳು ಹಾಗೂ ಮೆಟ್ರಿಕ್ ನಂತ್ರದ ಕಾರ್ಯಕ್ರಮದಡಿ 3,48,235 ಅರ್ಜಿಗಳು ಸ್ವೀಕೃತಗೊಂಡಿರುತ್ತದೆ. ಅದರಂತೆ 2020-21ನೇ ಸಾಲಿನಲ್ಲಿ ಸದರಿ ಕಾರ್ಯಕ್ರಮಗಳಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 15-02-2021ರಿಂದ ದಿನಾಂಕ 15-03-2021ರವರೆಗೆ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದೆ. ಇದುವರೆಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ 6,028 ಅರ್ಜಿಗಳು ಹಾಗೂ ಮೆಟ್ರಿಕ್ ನಂತ್ರದ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ 6,832 ವಿದ್ಯಾರ್ಥಿಗಳು ಖಾತೆಯನ್ನು ಸೃಜಿಸಿದ್ದು, 213 ವಿದ್ಯಾರ್ಥಿಗಳು ಅರ್ಜಿಗಳು ತಂತ್ರಾಂಶದಲ್ಲಿ ಸ್ವೀಕೃತಗೊಂಡಿರುತ್ತದೆ ಎಂಬುದಾಗಿ ತಿಳಿಸಿದ್ದಾರೆ.

TRENDING