Tuesday, April 13, 2021
Home ರಾಜ್ಯ ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್

ಮೈಸೂರು: ಸರ್ಕಾರವು ಈಗಾಗಲೇ ಸರ್ಕಾರಿ ನೌಕರರಿಗೆ ನಗದುರಹಿತ ಚಿಕಿತ್ಸೆ ನೀಡುವುದಾಗಿ ಭರವಸೆ ನೀಡಿದ್ದು, ಏಪ್ರಿಲ್ 1ರಿಂದ ಈ ಕುರಿತ ಯೋಜನೆ ಜಾರಿಗೆ ಬರಬಹುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ತಿಳಿಸಿದರು.‌

ಸಾರ್ವಜನಿಕ ಶಿಕ್ಷಣ ಇಲಾಖೆಯ ಲಿಪಿಕ ನೌಕರರು, ವಾಹನ ಚಾಲಕರು ಮತ್ತು ಗ್ರೂಪ್-ಡಿ ನೌಕರರ ಸಂಘದ ಮೈಸೂರು ವಿಭಾಗದ ವತಿಯಿಂದ ಮೈಸೂರಿನ ಕಲಾಮಂದಿರದಲ್ಲಿ ಶುಕ್ರವಾರ ನಡೆದ ‘ಮೈಸೂರು ವಿಭಾಗೀಯ ಬೋಧಕೇತರ ನೌಕರರಿಗೆ ಆನ್‌ಲೈನ್‌ ಸೇವೆಗಳ ಕುರಿತ ಕಾರ್ಯಾಗಾರ’ದಲ್ಲಿ ಅವರು ಮಾತನಾಡಿದರು.

ಈ ಯೋಜನೆ ಅಡಿಯಲ್ಲಿ ಸಾಮಾನ್ಯ ಚಿಕಿತ್ಸೆಗೆ ₹1 ಲಕ್ಷದಿಂದ ₹1.5 ಲಕ್ಷ, ವಿಶೇಷ ಸಂದರ್ಭಗಳಲ್ಲಿ ಇದರ ಮಿತಿ ₹ 50 ಲಕ್ಷದವರೆಗೂ ಇರುವ ಸಾಧ್ಯತೆ ಇದೆ. ಸರ್ಕಾರ ಶೀಘ್ರದಲ್ಲೇ ಈ ಕುರಿತ ತೀರ್ಮಾನ ಪ್ರಕಟಿಸಲಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ಮಾದರಿಯಲ್ಲಿ ಹುದ್ದೆ ಆಧಾರಿತ ಬಡ್ತಿ ಸೌಲಭ್ಯ ನೀಡುವ ಪ್ರಸ್ತಾವವನ್ನು ಸರ್ಕಾರದ ಮುಂದಿರಿಸಲಾಗಿದೆ. ಇದಕ್ಕೂ ಸರ್ಕಾರ ಸಕಾರಾತ್ಮಕವಾಗಿಯೇ ಸ್ಪಂದಿಸಿದೆ. ಇದರಿಂದ ಬಡ್ತಿ ಸೌಲಭ್ಯ ಶೇ 30ರಷ್ಟು ಹೆಚ್ಚಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.

TRENDING