Saturday, April 17, 2021
Home ದೆಹಲಿ ಕೇಂದ್ರ ಬಜೆಟ್ ನಿಂದ ಆತ್ಮನಿರ್ಭರ್ ಭಾರತ್ ನಿರ್ಮಾಣ: ಸಚಿವೆ ನಿರ್ಮಲಾ ಸೀತಾರಾಮನ್

ಇದೀಗ ಬಂದ ಸುದ್ದಿ

ಕೇಂದ್ರ ಬಜೆಟ್ ನಿಂದ ಆತ್ಮನಿರ್ಭರ್ ಭಾರತ್ ನಿರ್ಮಾಣ: ಸಚಿವೆ ನಿರ್ಮಲಾ ಸೀತಾರಾಮನ್

 2021-22ನೇ ಸಾಲಿನ ಕೇಂದ್ರ ಬಜೆಟ್​​ನ ಸಮರ್ಪಕ ಅನುಷ್ಠಾನದಿಂದಾಗಿ ಆತ್ಮ ನಿರ್ಭರ್ ಭಾರತ ನಿರ್ಮಾಣವಾಗಲಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಶನಿವಾರ ಹೇಳಿದ್ದಾರೆ.

ಲೋಕಸಭೆಯಲ್ಲಿ ಕೇಂದ್ರ ಬಜೆಟ್​ ಕುರಿತ ಚರ್ಚೆಗೆ ಉತ್ತರಿಸಿದ ನಿರ್ಮಲಾ ಸೀತಾರಾಮನ್​, ಕೋವಿಡ್ 19ನಿಂದಾಗಿ ಸರ್ಕಾರದ ಮುಂದೆ ಹಲವಾರು ಸವಾಲುಗಳಿವೆ. ಹೀಗಾಗಿ ಈ ಬಾರಿಯ ಕೇಂದ್ರ ಬಜೆಟ್​ ಆರ್ಥಿಕತೆ ಸುಧಾರಣೆಯ ಮೇಲೆ ಕೇಂದ್ರೀಕರಿಸಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಸಾಂಕ್ರಾಮಿಕ ರೋಗದ ಪರಿಸ್ಥಿತಿಯಲ್ಲೂ ದೇಶದ ಆರ್ಥಿಕತೆಯನ್ನ ಉತ್ತೇಜಿಸಲು ಬೇಕಾದ ಅಗತ್ಯ ಸುಧಾರಣೆಗಳನ್ನ ಕೈಗೊಂಡಿದೆ. ಅಲ್ಲದೇ ಈ ಬಜೆಟ್​ ದೇಶಕ್ಕೆ ದೀರ್ಘಾವಧಿಯ ಬೆಳವಣಿಗೆಯನ್ನ ನೀಡಲಿದೆ ಎಂದು ಹೇಳಿದ್ದಾರೆ.

TRENDING