Tuesday, April 13, 2021
Home ಸುದ್ದಿ ಜಾಲ ರಾಮಮಂದಿರ ನಿರ್ಮಾಣಕ್ಕೆ ಇದುವರೆಗೂ ಸಂಗ್ರಹವಾದ ದೇಣಿಗೆ ಎಷ್ಟು ಗೊತ್ತೆ?

ಇದೀಗ ಬಂದ ಸುದ್ದಿ

ರಾಮಮಂದಿರ ನಿರ್ಮಾಣಕ್ಕೆ ಇದುವರೆಗೂ ಸಂಗ್ರಹವಾದ ದೇಣಿಗೆ ಎಷ್ಟು ಗೊತ್ತೆ?

ಸೂರತ್: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ದೇಶಾದ್ಯಂತ ದೇಣಿಗೆ ಸಂಗ್ರಹ ನಡೆಸುತ್ತಿದ್ದು, ಇದುವರೆಗೂ 1,511 ಕೋಟಿ ರೂಪಾಯಿ ಸಂಗ್ರಹವಾಗಿರುವುದಾಗಿ ತಿಳಿದುಬಂದಿದೆ.

ದೇಗುಲ ನಿರ್ಮಾಣಕ್ಕೆ ಜನವರಿ 15ರಂದು ದೇಣಿಗೆ ಸಂಗ್ರಹ ಕಾರ್ಯ ಆರಂಭಗೊಂಡಿದ್ದು, ಫೆಬ್ರವರಿ 27ರವರೆಗೂ ಮುಂದುವರೆಯಲಿದೆ. ಫೆ.11ರ ಗುರುವಾರ ಸಂಜೆಯವರೆಗೂ 1,511ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ಟ್ರಸ್ಟ್‌ ಖಜಾಂಚಿ ಸ್ವಾಮಿ ಗೋವಿಂದ ದೇವ್ ಗಿರಿ ಮಾಹಿತಿ ನೀಡಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ಇಡೀ ದೇಶವೇ ದೇಣಿಗೆ ನೀಡುತ್ತಿದೆ. ದೇಣಿಗೆ ಕಾರ್ಯಕ್ಕೆ ದೇಶಾದ್ಯಂತ ನಾವು ನಾಲ್ಕು ಲಕ್ಷ ಗ್ರಾಮಗಳನ್ನು ಹಾಗೂ ಹನ್ನೊಂದು ಕೋಟಿ ಕುಟುಂಬಗಳನ್ನು ತಲುಪುವ ಗುರಿ ಇಟ್ಟುಕೊಂಡಿದ್ದೇವೆ ಎಂದು ಟ್ರಸ್ಟ್‌ನ ಸ್ವಾಮಿ ಗೋವಿಂದ್ ದೇವ ಗಿರಿ ಅವರು ತಿಳಿಸಿದ್ದಾರೆ. 492 ವರ್ಷಗಳ ನಂತರ ಜನರಿಗೆ ಧರ್ಮಕ್ಕಾಗಿ ದೇಣಿಗೆ ನೀಡುವ ಇಂಥ ಅಪರೂಪದ ಅವಕಾಶ ಸಿಕ್ಕಿದೆ ಎಂದು ಹೇಳಿದ್ದಾರೆ.

TRENDING