Saturday, April 17, 2021
Home ರಾಜ್ಯ 9 ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಬದಲಾಯಿಸಿದ ರಾಜ್ಯ ಸರ್ಕಾರ

ಇದೀಗ ಬಂದ ಸುದ್ದಿ

9 ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಬದಲಾಯಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದ ಐಎಎಸ್ ಅಧಿಕಾರಿಗಳ ಬೃಹತ್ ವರ್ಗಾವಣೆಯಾಗಿದೆ. ಒಟ್ಟು 9 ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ಹೊಸ ಅಧಿಕಾರಿಗಳನ್ನು ನೇಮಿಸಲಾಗಿದೆ. ರಾಜ್ಯ ಒಟ್ಟು 42 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಜಿಲ್ಲಾಧಿಕಾರಿಗಳ ವರ್ಗಾವಣೆ ಪಟ್ಟಿ ಹೀಗಿದೆ:

ಮಂಡ್ಯ ಜಿಲ್ಲಾಧಿಕಾರಿಯಾಗಿದ್ದ ಎಂ.ವಿ. ವೆಂಕಟೇಶ್ ಅವರನ್ನು ಜಲಾನಯನ ಅಭಿವೃದ್ಧಿ ನಿಗಮದ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಮಂಡ್ಯ ಡಿಸಿಯಾಗಿ ಅಶ್ವತಿ ಎಸ್ ಅವರನ್ನು ನೇಮಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿದ್ದ ಬಗಾದಿ ಗೌತಮ್ ಅವರನ್ನು ವಾಣಿಜ್ಯ ತೆರಿಗೆ ವಿಭಾಗದ ಹೆಚ್ಚುವರಿ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಇವರ ಜಾಗಕ್ಕೆ ಕೆ.ಎನ್. ರಮೇಶ್ ಅವರನ್ನು ನೇಮಿಸಲಾಗಿದೆ.

ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಆರ್.ವೆಂಕಟೇಶ್ ಕುಮಾರ್ ಅವರನ್ನು ಕಲಬುರಗಿ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಜಂಟಿ ಆಯುಕ್ತರನ್ನಾಗಿ ನೇಮಿಸಲಾಗಿದೆ. ಇವರ ಜಾಗಕ್ಕೆ ವೆಂಕಟರಾಜ ಅವರನ್ನು ನೇಮಿಸಲಾಗಿದೆ.

ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಜಿ.ಎನ್. ಶಿವಮೂರ್ತಿ ಅವರನ್ನು ಕಬ್ಬು ಮತ್ತು ಸಕ್ಕರೆ ಅಭಿವೃದ್ಧಿ ನಿಗಮ ಆಯುಕ್ತರನ್ನಾಗಿ ನೇಮಿಸಲಾಗಿದೆ. ಬೆಂಗಳೂರು ನಗರ

ಜಿಲ್ಲಾಧಿಕಾರಿಯಾಗಿ ಜೆ. ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ.

ತುಮಕೂರು ಡಿಸಿಯಾಗಿದ್ದ ರಾಕೇಶ್ ಕುಮಾರ್ ಅವರನ್ನು ಪ್ರವಾಸೋದ್ಯಮ ಇಲಾಖೆ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಇವರ ಜಾಗಕ್ಕೆ ಪಾಟೀಲ್ ಯಲಗೌಡ ಶಿವನಗೌಡ ಅವರನ್ನು ನೇಮಿಸಲಾಗಿದೆ.

ಮಂಗಳೂರು ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ಸೆಲ್ವಮಣಿ ಅವರನ್ನು ಕೋಲಾರ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಇವರ ಜಾಗಕ್ಕೆ ಕುಮಾರ ಅವರನ್ನು ನೇಮಿಸಲಾಗಿದೆ.

ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಹರೀಶ್ ಕುಮಾರ್ ಅವರನ್ನು ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ, ಮುಲ್ಲಾ ಮುಹಿಲಾನ್ ಅವರನ್ನು ನೇಮಿಸಲಾಗಿದೆ.

ಚಾಮರಾಜನಗರ ಜಿಲ್ಲಾಧಿಕಾರಿಯಾಗಿದ್ದ ರವಿ.ಎಂ.ಆರ್ ಅವರನ್ನು ಸಕಾಲ ಮಿಶನ್ ನಿರ್ದೇಶಕರನ್ನಾಗಿ ವರ್ಗಾಯಿಸಿ, ಅವರ ಜಾಗಕ್ಕೆ ಬಿ.ಸಿ.ಸತೀಶ್ ಅವರನ್ನು ನೇಮಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಪಿ.ಎನ್. ರವೀಂದ್ರ ಅವರನ್ನು ಯುವಜನ ಮತ್ತು ಕ್ರೀಡಾ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಇವರ ಜಾಗಕ್ಕೆ ಕೆ.ಶ್ರೀನಿವಾಸ್ ಅವರನ್ನು ನೇಮಿಸಲಾಗಿದೆ.

ಕೋಲಾರ ಜಿಲ್ಲಾಧಿಕಾರಿಯಾಗಿದ್ದ ಸತ್ಯಭಾಮಾ ಅವರನ್ನು ಕರ್ನಾಟಕ ಸಣ್ಣ ಕೈಗಾರಿಕೆ ಇಲಾಖೆಗೆ ಎಂ.ಡಿ ಯಾಗಿ ನೇಮಿಸಲಾಗಿದೆ. ಇವರ ಜಾಗಕ್ಕೆ ಸೆಲ್ವಮಣಿ ಅವರನ್ನು ನೇಮಿಸಲಾಗಿದೆ.

TRENDING