Saturday, April 17, 2021
Home ಸುದ್ದಿ ಜಾಲ ರಾಮ ಮಂದಿರ ನಿರ್ಮಾಣಕ್ಕೆ 10 ಲಕ್ಷ ರೂ ದೇಣಿಗೆ ನೀಡಿದ ಡಿಸಿಎಂ ಸವದಿ

ಇದೀಗ ಬಂದ ಸುದ್ದಿ

ರಾಮ ಮಂದಿರ ನಿರ್ಮಾಣಕ್ಕೆ 10 ಲಕ್ಷ ರೂ ದೇಣಿಗೆ ನೀಡಿದ ಡಿಸಿಎಂ ಸವದಿ

ಅಥಣಿ: ಶ್ರೀರಾಮ ಮಂದಿರ ನಿರ್ಮಾಣ ಕಾರ್ಯಕ್ಕಾಗಿ ದೇಶಾದ್ಯಂತ ದೇಣಿಗೆ ಸಂಗ್ರಹ ಮಾಡಲಾಗುತ್ತಿದ್ದು, ಇದೀಗ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ೧೦ ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಸವದಿ, ಸುಪ್ರೀಂ ಕೋರ್ಟ್​ ತೀರ್ಪಿನಂತೆ ರಾಮ ಮಂದಿರ ನಿರ್ಮಾಣ ಆದೇಶವನ್ನು ದೇಶದ ಜನ ಸ್ವಾಗತಿಸಿದ್ದಾರೆ. ಇದರಿಂದಾಗಿ ದೇವಸ್ಥಾನ ನಿರ್ಮಾಣಕ್ಕೆ ಸರ್ಕಾರd ಹಣ ಬೇಡ, ಜನರ ಹಣದಿಂದ ದೇವಾಲಯ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ದೇಶಾದ್ಯಂತ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಮಾಡಲಾಗುತ್ತಿದೆ. ಇದರಲ್ಲಿ ನನ್ನ ಅಳಿಲು ಸೇವೆಯಾಗಿ 10 ಲಕ್ಷ ರೂಪಾಯಿ ನೀಡಿರುವುದು ನನ್ನ ಸೌಭಾಗ್ಯ ಎಂದು ಅವರು ಹೇಳಿದರು.

TRENDING