Saturday, April 17, 2021
Home ಸುದ್ದಿ ಜಾಲ ನಟಿ ಕಂಗನಾ ಚಿತ್ರೀಕರಣ ಪ್ರದೇಶಕ್ಕೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು

ಇದೀಗ ಬಂದ ಸುದ್ದಿ

ನಟಿ ಕಂಗನಾ ಚಿತ್ರೀಕರಣ ಪ್ರದೇಶಕ್ಕೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು

ಬೆತುಲ್ (.ಪ್ರದೇಶ): ಮಧ್ಯ ಪ್ರದೇಶದ ಬೆತುಲ್ ಜಿಲ್ಲೆಯಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ಸಿನಿಮಾ ಚಿತ್ರೀಕರಣ ನಡೆಸುತ್ತಿದ್ದ ಸ್ಥಳಕ್ಕೆ ಪ್ರತಿಭಟನೆ ನಡೆಸಿರುವ ಕಾಂಗ್ರೆಸ್ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಜಲ ಫಿರಂಗಿಗಳನ್ನು ಪ್ರಯೋಗಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚೆಗೆ ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಸೇರಿದಂತೆ ಅನೇಕ ವಿಷಯಗಳ ಕುರಿತಾಗಿ ಟ್ವೀಟ್ ಮಾಡಿರುವ ನಟಿ ಕಂಗನಾ ರಣಾವತ್ ವಿವಾದಕ್ಕೊಳಗಾಗಿದ್ದರು.

ಕಂಗನಾ ರಣಾವತ್ ಕ್ಷಮೆ ಯಾಚನೆ ನಡೆಸಬೇಕೆಂಬ ಬೇಡಿಕೆಯೊಂದಿಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ವಿದ್ಯುತ್ ಕೇಂದ್ರದ ಕಲ್ಲಿದ್ದಲು ನಿರ್ವಹಣಾ ಘಟಕದಲ್ಲಿ ಕಂಗನಾ ಸಿನಿಮಾ ಶೂಟಿಂಗ್‌ನಲ್ಲಿ ನಿರತವಾಗಿದ್ದರು.

ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆಯಿಂದಾಗಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.

ಮಧ್ಯ ಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಸೂಚನೆಯಂತೆ ಕಂಗನಾ ಚಿತ್ರೀಕರಣದ ಪ್ರದೇಶದಲ್ಲಿ ಭದ್ರತೆಗಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಜನವರಿ 17ರ ವರೆಗೆ ಚಿತ್ರೀಕರಣ ಮುಂದುವರಿಯಲಿದೆ.

TRENDING