Saturday, April 17, 2021
Home ಸುದ್ದಿ ಜಾಲ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಸಿಹಿ ಸುದ್ದಿ

ಇದೀಗ ಬಂದ ಸುದ್ದಿ

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಸಿಹಿ ಸುದ್ದಿ

 ಚಿತ್ರದುರ್ಗ: ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ(ಎನ್‍ಸಿಎಸ್‍ಪಿ) ಅಡಿಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಚಿತ್ರದುರ್ಗ, ವೇದಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯೂರು ಇವರ ಸಂಯುಕ್ತಾಶ್ರಯದಲ್ಲಿ ಫೆಬ್ರುವರಿ 18 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಹಿರಿಯೂರು ತಾಲ್ಲೂಕಿನ ವೇದಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಮೇಳದಲ್ಲಿ 15 ಕ್ಕೂ ಹೆಚ್ಚು ಪ್ರತಿಷ್ಠಿತ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲು ಭಾಗವಹಿಸಲಿದ್ದಾರೆ. ಆಸಕ್ತರು ಅಗತ್ಯ ದಾಖಲೆಗಳಾದ ಬಯೊಡಾಟಾ 8 ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್ ತರತಕ್ಕದು. ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಚಿತ್ರದುರ್ಗ ದೂರವಾಣಿ: 08194-230485, 7022459064, 8105619020, 8073037905 ಗೆ ಸಂಪಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

TRENDING