Saturday, April 17, 2021
Home ಸುದ್ದಿ ಜಾಲ ಉತ್ತರಾಖಂಡ್ ದುರಂತ : 12 ಮೃತದೇಹ ಪತ್ತೆ ಮಾಡಿದ ಎನ್ ಡಿಆರ್‌ಎಫ್

ಇದೀಗ ಬಂದ ಸುದ್ದಿ

ಉತ್ತರಾಖಂಡ್ ದುರಂತ : 12 ಮೃತದೇಹ ಪತ್ತೆ ಮಾಡಿದ ಎನ್ ಡಿಆರ್‌ಎಫ್

 ಡೆಹ್ರಾಡೂನ್, ಫೆ.14: ಉತ್ತರಾಖಂಡ್ ಚಮೋಲಿ ಜಿಲ್ಲೆಯ ತಪೋವನ ಪ್ರದೇಶದಲ್ಲಿ ಎಂಟನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಸಲಾಗಿದೆ. ಭಾನುವಾರ 12 ಮಂದಿ ಕಾರ್ಮಿಕರ ಮೃತದೇಹಗಳು ಪತ್ತೆಯಾಗಿದ್ದು, ಸಾವಿನ ಸಂಖ್ಯೆ 50ಕ್ಕೆ ಏರಿಕೆಯಾಗಿದೆ.

ಚಮೋಲಿ ಜಿಲ್ಲೆಯ ತಪೋವನ ಸುರಂಗದ ಬಳಿ ಭಾನುವಾರ 5 ಮತ್ತು ರೈನಿ ಗ್ರಾಮದ ಬಳಿ 5 ಕಾರ್ಮಿಕರ ಮೃತದೇಹಗಳನ್ನು ಪತ್ತೆಯಾಗಿವೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಡೆಪ್ಯುಟಿ ಕಮಾಂಡರ್ ಆದಿತ್ಯ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.

ಉತ್ತರಾಂಖಡ ಪ್ರವಾಹದಲ್ಲಿ ನಾಪತ್ತೆಯಾಗಿರುವ 204 ಮಂದಿ ಕಾರ್ಮಿಕರಲ್ಲಿ 44 ಮಂದಿ ಪತ್ತೆಯಾಗಿದ್ದು, 160 ಮಂದಿಯ ಬಗ್ಗೆ ಇನ್ನೂ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಉತ್ತರಾಖಂಡ್ ಡಿಜಿಪಿ ಅಶೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.

ಎನ್ ಟಿಪಿಸಿ 480 ಮೆಗಾ ವ್ಯಾಟ್ ತಪೋವನ-ವಿಷ್ಣುಗಢ್ ಹೈಡ್ರೋ ಪವರ್ ಪ್ರಾಜೆಕ್ಟ್ ಮತ್ತು 13.2 ಮೆಗಾ ವ್ಯಾಟ್ ನ ರಿಷಿಗಂಗಾ ಹೈಡಲ್ ಪ್ರಾಜೆಕ್ಟ್ ಗೆ ಹಾನಿಯಾಗಿದೆ. ಈ ಪ್ರದೇಶದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಹೇಳಿದ್ದಾರೆ.

600 ಭದ್ರತಾ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ:

ಹಿಮಪಾತ ಮತ್ತು ಪ್ರವಾಹ ಪರಿಸ್ಥಿತಿಯಿಂದಾಗಿ ಉತ್ತರಾಖಂಡ್ ಹಲವು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ರೇನಿ ಪಲ್ಲಿ, ಪಾಂಗ್, ಲಟಾ, ಸುರೈತೋಟಾ, ಸುಕಿ, ಭಲ್ಗೋನ್, ತೋಲ್ಮಾ, ಫಾಗ್ರಸು, ಲೊಂಗ್ ಸೇಗ್ದಿ, ಗಹಾರ್, ಭಂಗ್ಯೂಲ್, ಜುವಾಗ್ವಾಡ್, ಜುಗ್ಜು ಸೇರಿದಂತೆ ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ರಾಜ್ಯ ವಿಪತ್ತು ನಿರ್ವಹಣಾ ತಂಡ, ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಮತ್ತು ಭಾರತೀಯ ಸೇನಾ ಪಡೆಯ 600ಕ್ಕೂ ಹೆಚ್ಚು ಸಿಬ್ಬಂದಿಯು ಚಮೋಲಿ ಜಿಲ್ಲೆಯಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.

TRENDING