Saturday, April 17, 2021
Home ಜಿಲ್ಲೆ ಮೈಸೂರು ಮೈಸೂರು : ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್

ಇದೀಗ ಬಂದ ಸುದ್ದಿ

ಮೈಸೂರು : ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್

ಮೈಸೂರು, ಫೆ.15: ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳ ಚುನಾವಣೆಗೆ ಫೆ.24ಕ್ಕೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಮೈಸೂರಿನ ಪ್ರಥಮ ಪ್ರಜೆಯಾಗಿ ಯಾರು ಆಯ್ಕೆಯಾಗಲಿದ್ದಾರೆ ಎನ್ನುವ ಕುತೂಹಲ ಕೆರಳಿಸುವಂತೆ ಮಾಡಿವೆ.

ಈಗಾಗಲೇ ಹೊಸ ಮೀಸಲಾತಿ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸಾಮಾನ್ಯ ಮಹಿಳೆಗೆ ಮೇಯರ್ ಸ್ಥಾನ ಹಾಗೂ ಉಪ ಮೇಯರ್ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ಮೀಸಲಾಗಿರಿಸಿ ಸರ್ಕಾರ ಆದೇಶ ಹೊರಡಿಸಿದೆ.

ಜ.17ರಂದು ಹಾಲಿ ಮೇಯರ್ ತಸ್ನಿಂ ಹಾಗೂ ಉಪ ಮೇಯರ್ ಶ್ರೀಧರ್ ಅವರ ಅಧಿಕಾರದ ಅವಧಿಯು ಅಂತ್ಯವಾಗಿದ್ದು, ಫೆ.24ರಂದು ನೂತನ ಮಹಾಪೌರರ ಆಯ್ಕೆ ನಡೆಯಲಿದೆ. ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿಕಾರಿ ಡಾ.ಜಿ.ಸಿ.ಪ್ರಕಾಶ್ ಅವರು ಚುನಾವಣೆ ದಿನಾಂಕದ ಅಧಿಸೂಚನೆ ಹೊರಡಿಸಿದ್ದು, ಅಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ವಿಶೇಷ ಸಭೆಯಲ್ಲಿ ಹಾಜರಿರುವಂತೆ ಸದಸ್ಯರಿಗೆ ಸಭಾಸೂಚನಾ ಪತ್ರಗಳನ್ನು ಕಳುಹಿಸಿದ್ದಾರೆ.

ಫೆ. 24ರಂದು ಬೆಳಿಗ್ಗೆ 8ರಿಂದ 10 ಗಂಟೆಯವರೆಗೆ ನಾಮಪತ್ರಗಳ ಸ್ವೀಕಾರ ನಡೆಯಲಿದೆ. ನಂತರ, 11 ಗಂಟೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ. ಮೇಯರ್ ಸ್ಥಾನವು ಸಾಮಾನ್ಯ ಮಹಿಳೆಗೆ ಹಾಗೂ ಉಪ ಮಹಾಪೌರ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಈ ಎರಡು ಸ್ಥಾನಗಳಿಗೆ ಚುನಾವಣೆ ನಡೆಯುವ ಜತೆಗೆ ನಾಲ್ಕು ಸ್ಥಾಯಿ ಸಮಿತಿಗಳ ತಲಾ ಏಳು ಸದಸ್ಯರ ಸ್ಥಾನಗಳಿಗೂ ಚುನಾವಣೆ ನಡೆಯಲಿದೆ.

ಈ ನಡುವೆ ಮೇಯರ್ ಚುನಾವಣೆ ದಿನಾಂಕ ನಿಗದಿಯಾಗುತ್ತಿದ್ದಂತೆ, ಚುನಾವಣೆಯಲ್ಲಿ ಮತದಾನ ಮಾಡುವ ಹಕ್ಕು ಹೊಂದಿರುವ ಸದಸ್ಯರಿಗೆ ಸಭಾಸೂಚನಾ ಪತ್ರಗಳನ್ನು ಕಳುಹಿಸಲಾಗಿದೆ.

TRENDING