Tuesday, April 13, 2021
Home ಸುದ್ದಿ ಜಾಲ BPL ಕಾರ್ಡ್ ಹೊಂದಿದವರಿಗೆ ಮತ್ತೊಂದು ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

BPL ಕಾರ್ಡ್ ಹೊಂದಿದವರಿಗೆ ಮತ್ತೊಂದು ಗುಡ್ ನ್ಯೂಸ್

ಬೈಕ್, ಟಿವಿ, ಫ್ರಿಡ್ಜ್ ಹೊಂದಿದವರ ಬಿಪಿಎಲ್ ಕಾರ್ಡ್ ರದ್ದುಪಡಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ ನಂತರ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸಚಿವರು ಈ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ.

ಈ ವಿಚಾರದಲ್ಲಿ ಯಾವುದೇ ಆದೇಶ ಹೊರಡಿಸಿಲ್ಲ. ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಈ ಹಿಂದಿನ ಮಾನದಂಡವೇ ಜಾರಿಯಲ್ಲಿರುತ್ತದೆ ಎಂದು ಸಚಿವರು ತಿಳಿಸಿದ್ದಾರೆ. ಟಿವಿ, ಫ್ರಿಡ್ಜ್, ಬೈಕ್ ಇದ್ದರೂ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಸ್ವಪಕ್ಷೀಯರು ಸೇರಿದಂತೆ ಪ್ರತಿಪಕ್ಷಗಳ ನಾಯಕರಿಂದ ಹಾಗೂ ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸಚಿವರು ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

TRENDING