ಬೆಂಗಳೂರು: ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಉಮೇಶ್ ಕತ್ತಿಯವರು, ರಾಜ್ಯದಲ್ಲಿನ ಬಿಪಿಎಲ್ ಕಾರ್ಡ್ ದಾರರಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಹೊಸ ಆದೇಶಕ್ಕೆ ವಿವಾದವನ್ನು ಹುಟ್ಟುಹಾಕಿತ್ತು. ಈ ಬಗ್ಗೆ ಟ್ವಿಟರ್ನಲ್ಲಿ ಕಿಡಿಕಾರಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಸಚಿವ ಉಮೇಶ್ ಕತ್ತಿಯವರೇ, ನಿಮ್ಮದೇ ಒಂದು ರಾಜ್ಯ ಕಟ್ಟಿ ನೀವೇ ಮುಖ್ಯಮಂತ್ರಿಗಳಾದಾಗ ಇಂತಹ ತುಘಲಕ್ ದರ್ಬಾರ್ ನಡೆಸಿ.
ಈಗ ಕಷ್ಟಪಟ್ಟು ಗಳಿಸಿರುವ ಮಂತ್ರಿಸ್ಥಾನದಲ್ಲಿ ಕೂತು ಜನತೆಗೆ ಒಳ್ಳೆಯದನ್ನು ಮಾಡಿ. ನಿಮ್ಮ ಅಧಿಕಪ್ರಸಂಗತನದ ವಿರುದ್ಧ ಜನ ರೊಚ್ಚಿಗೆದ್ದು ಕತ್ತಿ ಬೀಸಿದರೆ ಇದ್ದ ಕುರ್ಚಿಯೂ ಬಿಡಬೇಕಾದೀತು ಅಂತ ಕುಟುಕಿದ್ದಾರೆ.
ಆಹಾರ ಸಚಿವ ಉಮೇಶ್ ಕತ್ತಿ ಭಾನುವಾರ ಟಿವಿ, ಫ್ರಿಡ್ಜ್, ಬೈಕ್ ಇದ್ದವರು BPL ಕಾರ್ಡ್ ಹಿಂದಿರುಗಿಸಿ ಎಂಬ ಹೇಳಿಕೆ ಕೊಟ್ಟಿದ್ದರು, ಇದು ರಾಜ್ಯದ ಜನರ ಆಕ್ರೋಶಕ್ಕೆ ಕಾರಣವಾಗಿತ್ತು, ಬಳಿಕ ಎಚ್ಚೆತ್ತುಕೊಂಡ ಅವರು ತಮ್ಮ ಹೇಳಿಕೆಯನ್ನು ವಾಪಸ್ಸು ಪಡೆದು ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಪಾಲನೆ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ.