Tuesday, April 13, 2021
Home ಸುದ್ದಿ ಜಾಲ ರಾಜ್ಯದ ಜನತೆಗೆ ಕೇಂದ್ರ ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿ

ಇದೀಗ ಬಂದ ಸುದ್ದಿ

ರಾಜ್ಯದ ಜನತೆಗೆ ಕೇಂದ್ರ ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿ

 ರಸ್ತೆ ಪ್ರಯಾಣದ ವೇಳೆ ಒಂದೊಮ್ಮೆ ರೈಲ್ವೆ ಗೇಟ್ ಹಾಕಿದ ಸಂದರ್ಭದಲ್ಲಿ ಬಹಳಷ್ಟು ಹೊತ್ತು ಕಾಯಬೇಕಾದ ಪರಿಸ್ಥಿತಿ ಬರುತ್ತದೆ. ಅಲ್ಲದೆ ರೈಲು ಹೋದ ನಂತರ ಗೇಟ್ ತೆರೆದ ಬಳಿಕವೂ ವಾಹನ ದಟ್ಟಣೆಯಿಂದಾಗಿ ಕಿರಿಕಿರಿ ಅನುಭವಿಸಬೇಕಾಗುತ್ತದೆ.

ಇದೀಗ ಕೇಂದ್ರ ರೈಲ್ವೆ ಸಚಿವ ಪಿಯುಷ್ ಗೊಯಲ್ ರಾಜ್ಯದ ಜನತೆಗೆ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ. ರಾಜ್ಯದಲ್ಲಿ 46 ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಇದರಿಂದ ತಡೆರಹಿತ ಸಂಚಾರ ಸಾಧ್ಯವಾಗಲಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ನಿರ್ಮಾಣವಾಗಲಿರುವ ಮೂರು ಮೇಲು ಸೇತುವೆಗಳ ಶಿಲಾನ್ಯಾಸ ಸಮಾರಂಭವನ್ನು ಸೋಮವಾರದಂದು ಆನ್ಲೈನ್ನಲ್ಲಿ ಉದ್ಘಾಟಿಸಿ ಮಾತನಾಡಿದ ಅವರು ಈ ವಿಷಯ ತಿಳಿಸಿದ್ದು, 46 ಮೇಲು ಸೇತುವೆಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ 683 ಕೋಟಿ ರೂಪಾಯಿ ಅನುದಾನ ಒದಗಿಸುವ ಭರವಸೆ ನೀಡಿದೆ ಎಂದು ತಿಳಿಸಿದರು.

TRENDING