Saturday, April 17, 2021
Home ದೆಹಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

ಇದೀಗ ಬಂದ ಸುದ್ದಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

 ಈ ಮೊದಲು ಬ್ಯಾಂಕುಗಳ ವಿಲೀನ ಪ್ರಕ್ರಿಯೆಯನ್ನು ನಡೆಸಿದ್ದ ಕೇಂದ್ರ ಸರ್ಕಾರ, ಇದೀಗ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು ಖಾಸಗೀಕರಣಕ್ಕೆ ಮುಂದಾಗಿದ್ದು ಇದಕ್ಕಾಗಿ ಮಧ್ಯಮ ಗಾತ್ರದ ನಾಲ್ಕು ಬ್ಯಾಂಕ್ ಗಳ ಪಟ್ಟಿಯನ್ನು ಸಿದ್ದಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಬ್ಯಾಂಕ್ ಆಫ್ ಮಹಾರಾಷ್ಟ್ರ, ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಓವರ್ಸೀಸ್ ಬ್ಯಾಂಕ್ ಹಾಗೂ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಕೇಂದ್ರ ಸರ್ಕಾರದ ಪಟ್ಟಿಯಲ್ಲಿದೆ ಎನ್ನಲಾಗಿದ್ದು, ಈ ಪೈಕಿ ಎರಡು ಬ್ಯಾಂಕುಗಳಲ್ಲಿ ತಾನು ಹೊಂದಿರುವ ಷೇರು ಪಾಲನ್ನು ಕೇಂದ್ರ ಸರ್ಕಾರ ಮಾರಾಟ ಮಾಡಲಿದೆ ಎನ್ನಲಾಗಿದೆ.

ಬ್ಯಾಂಕುಗಳ ಖಾಸಗೀಕರಣಕ್ಕೆ ಬ್ಯಾಂಕ್ ನೌಕರರ ಒಕ್ಕೂಟ ತನ್ನ ತೀವ್ರ ವಿರೋಧವನ್ನು ವ್ಯಕ್ತ ಪಡಿಸಿದ್ದು, ಮುಷ್ಕರಕ್ಕೆ ಕರೆ ನೀಡಲಾಗಿದೆ. ಬ್ಯಾಂಕ್ ಆಫ್ ಇಂಡಿಯಾದಲ್ಲಿ 50 ಸಾವಿರ ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಲಾಗಿದ್ದು, ಇನ್ನುಳಿದಂತೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 33 ಸಾವಿರ, ಇಂಡಿಯನ್ ಓವರ್ಸೀಸ್ ಬ್ಯಾಂಕ್ ನಲ್ಲಿ 26 ಸಾವಿರ ಹಾಗೂ ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ 13 ಸಾವಿರ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಲಾಗಿದೆ.

TRENDING