Tuesday, April 13, 2021
Home ಸುದ್ದಿ ಜಾಲ ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮತಿ

ಇದೀಗ ಬಂದ ಸುದ್ದಿ

ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮತಿ

ವಿಶ್ವಸಂಸ್ಥೆ: ಕೋವಿಡ್-19 ನಿಯಂತ್ರಣದ ಸಲುವಾಗಿ ಅಸ್ಟ್ರಾಜೆನೆಕಾ-ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಅಸ್ಟ್ರಾಜೆನೆಕಾ ಲಸಿಕೆಯ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ ನೀಡಿದೆ.

ಔಷಧ ತಯಾರಿಕ ಕಂಪನಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಈ ಲಸಿಕೆಯನ್ನು ತಯಾರಿಸಿದೆ. ಭಾರತದಲ್ಲಿ ಸೆರಂ, ಕೊರಿಯಾದಲ್ಲಿ ಎಸ್‌ಕೆಬಯೊ ಸಂಸ್ಥೆಗಳು ಈ ಲಸಿಕೆಯನ್ನು ಉತ್ಪಾದನೆ ಮಾಡುತ್ತಿವೆ.

ನಾವು ಲಸಿಕೆ ತಯಾರಿಕೆ ಸಂಖ್ಯೆಯನ್ನು ಹೆಚ್ಚಿಸಬೇಕಿದ್ದು ಲಸಿಕೆಗಳನ್ನು ವೇಗವಾಗಿ ವಿತರಣೆ ಮಾಡಬೇಕಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಹಾ ನಿರ್ದೇಶಕ ಟೆಡ್ರೊಸ್‌ ಅಧಾನೊಮ್‌ ಗೆಬ್ರೆಯೆಸುಸ್‌ ಹೇಳಿದ್ದಾರೆ.

ಇದನ್ನು ಇತರೆ ಲಸಿಕೆಗಳಿಗೆ ಹೋಲಿಸಿದರೆ ಕಡಿಮೆ ಬೆಲೆಯಲ್ಲಿ ಲಭ್ಯವಿದ್ದು ನಿರ್ವಹಣೆಯು ಸರಳವಾಗಿದೆ. 8 ರಿಂದ 12 ವಾರಗಳಲ್ಲಿ 2 ಡೋಸ್‌ ಲಸಿಕೆ ನೀಡಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

TRENDING