Saturday, April 17, 2021
Home ಸುದ್ದಿ ಜಾಲ ರಾಜ್ಯದಲ್ಲಿ ಇಂದು 378 ಜನರಿಗೆ ಕೊರೋನಾ ಪಾಸಿಟಿವ್

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಇಂದು 378 ಜನರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಬುಧವಾರ 378 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,46,454ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,276ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 253 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,02,771ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಮೂವರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 537 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,28,461ಕ್ಕೆ ಏರಿಕೆಯಾಗಿದೆ. ಇನ್ನು 5698 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 124 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

TRENDING