Tuesday, April 13, 2021
Home ರಾಜ್ಯ FDA ಪ್ರಶ್ನೆ ಪತ್ರಿಕೆ ಸೋರಿಕೆ: ಸಿಸಿಬಿ ಪೊಲೀಸರಿಂದ ಮತ್ತೊಬ್ಬ ಆರೋಪಿ ಬಂಧನ

ಇದೀಗ ಬಂದ ಸುದ್ದಿ

FDA ಪ್ರಶ್ನೆ ಪತ್ರಿಕೆ ಸೋರಿಕೆ: ಸಿಸಿಬಿ ಪೊಲೀಸರಿಂದ ಮತ್ತೊಬ್ಬ ಆರೋಪಿ ಬಂಧನ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಲಿಂಗ ಪಾಟೀಲ್ ಎಂಬ ಆರೋಪಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈತನನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದು ಈತ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರು ಮಾಡುವ ಕೋಚಿಂಗ್ ಕೇಂದ್ರವನ್ನು ನಡೆಸುತ್ತಿದ್ದು ವರ್ಷದ ಹಿಂದೆ ಈ ಕೇಂದ್ರ ಮುಚ್ಚಿತ್ತು ಎಂದು ಬೆಂಗಳೂರು ಅಪರಾಧ ವಿಭಾಗದ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ರಾಜ್ಯದಾದ್ಯಂತ ಕಳೆದ ಜನವರಿ 24 ನಡೆಯಬೇಕಿದ್ದ ಎಫ್‌ಡಿಎ ಪರೀಕ್ಷೆ ಕೊನೆ ಗಳಿಕೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿತ್ತು. ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರ ಪೈಕಿ ರಾಚಪ್ಪ, ಚಂದ್ರ ಎಂಬುವವರ ಮಾಹಿತಿ ಪತ್ತೆಯಾಗಿದ್ದು, ಉಳಿದ ನಾಲ್ವರ ಹೆಸರು ಗೊತ್ತಾಗಿಲ್ಲ. ಬಂಧಿತರಿಂದ ಪ್ರಶ್ನೆಪತ್ರಿಕೆಗಳು ಹಾಗೂ 24 ಲಕ್ಷ ರೂ ನಗದನ್ನು ಜಪ್ತಿ ಮಾಡಲಾಗಿದೆ.

ಎಫ್‌ಡಿಎ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ನಂತರ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಲಾಗಿದೆ.

TRENDING