ಬೆಂಗಳೂರು: ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಫೆ. 26 ರಂದು ಕಾಂಗ್ರೆಸ್ ಸದಸ್ಯತ್ವ ಪಡೆದುಕೊಳ್ಳಲ್ಲಿದ್ದಾರೆ.
ಫೆ. 26 ರಂದು ಕೆಪಿಸಿಸಿ ಕಚೇರಿಗೆ ಆಗಮಿಸಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ , ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸದಸ್ಯತ್ವ ಸ್ವೀಕರಿಸಲಿದ್ದಾರೆ. ಮಾರ್ಚ್ ಮೊದಲ ವಾರದಲ್ಲಿ ಬೃಹತ್ ಸಮಾವೇಶ ಆಯೋಜಿಸಿ ಸಹಸ್ರಾರು ಕಾರ್ಯಕರ್ತರ ಸಮ್ಮುಖದಲ್ಲಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಲಿದ್ದಾರೆ.
ಎಂಟಿಬಿ ನಾಗರಾಜ್ ಅವರು ಬಿಜೆಪಿಯಲ್ಲಿ ಎಂಎಲ್ಸಿ ಆಗುತ್ತಿದ್ದಂತೆ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳು ರಾಜಕೀಯ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.
ಈ ಸಂಬಂಧ ಕಳೆದ ಆರು ತಿಂಗಳಿಂದ ಕಾರ್ಯಕರ್ತರು ಮತ್ತು ನಾಯಕರ ಜೊತೆ ಮಾತುಕತೆ ನಡೆಯುತ್ತಲೇ ಇತ್ತು. ಇದೀಗ ದಿನಾಂಕ ಫಿಕ್ಸ್ ಆಗಿದ್ದು ಪಕ್ಷಕ್ಕೆ ಸೇರ್ಪಡೆಯಾಗುವುದರಿಂದ ಹೊಸಕೋಟೆಯಲ್ಲಿ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಲಿದೆ.
ಈಗಾಗಲೇ ಹೊಸಕೋಟೆಯಲ್ಲಿ ಶರತ್ ಮತ್ತು ಎಂಟಿಬಿ ಬೆಂಬಲಿಗರ ನಡುವೆ ಸಾಕಷ್ಟು ಟಾಕ್ ವಾರ್ ನಡೆಯುತ್ತಲೇ ಇದೆ. ಇನ್ನು ಕಾಂಗ್ರೆಸ್ಗೆ ಸೇರ್ಪಡೆಯಾಗುವುದರಿಂದ ಘಟಾನುಘಟಿ ನಾಯಕರಿಂದ ಶರತ್ಗೆ ಬೆಂಬಲ ಸಿಗಲಿದೆ.
ಒಂದು ಕಡೆ ಮಿನಿಸ್ಟರ್ ಆಗಿರುವ ಎಂಟಿಬಿ ನಾಗರಾಜ್ ಅವರು ಹೊಸಕೋಟೆಯಲ್ಲಿ ಪುತ್ರನಿಗಾಗಿ ವೇದಿಕೆ ಸಿದ್ಧಪಡಿಸುತ್ತಿದ್ದಾರೆ. ಈ ನಡುವೆ ಶರತ್ ತನ್ನ ಅಸ್ತಿತ್ವ ಉಳಿಸಿಕೊಳ್ಳುವ ಕಾರಣದಿಂದ ಕಾಂಗ್ರೆಸ್ಗೆ ಸೇರ್ಪಡೆಯಾಗುವುದು ಅನಿವಾರ್ಯ ಎಂದೇ ಹೇಳಲಾಗುತ್ತಿದೆ.
ರಾಮು
ವಿ ನ್ಯೂಸ್ 24 ಕನ್ನಡ
ಹೊಸಕೋಟೆ