Tuesday, April 13, 2021
Home ಜಿಲ್ಲೆ ತುಮಕೂರು ತುಮಕೂರು : ಶ್ರೀದೇವಿ ಶಿಕ್ಷಣ ಸಂಸ್ಥೆ ಮೇಲೆ ಐಟಿ ದಾಳಿ

ಇದೀಗ ಬಂದ ಸುದ್ದಿ

ತುಮಕೂರು : ಶ್ರೀದೇವಿ ಶಿಕ್ಷಣ ಸಂಸ್ಥೆ ಮೇಲೆ ಐಟಿ ದಾಳಿ

ತುಮಕೂರು : ನಗರದ ಹೊರವಲಯದ ಶಿರಾ ಗೇಟ್ ಬಳಿ ಇರುವ ಶ್ರೀದೇವಿ ಶಿಕ್ಷಣ ಸಂಸ್ಥೆ ಮೇಲೆ ಬೆಳ್ಳಂಬೆಳಿಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ವಿವಿಧ ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ.

ಬಿಜೆಪಿ ಮುಖಂ‌ಡ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಡಾ. ಎಂ.ಆರ್. ಹುಲಿನಾಯ್ಕರ್ ಅವರ ಒಡೆತನದ ಶ್ರೀದೇವಿ ಶಿಕ್ಷಣ ಸಂಸ್ಥೆ ಮೇಲೆ ಹಾಗೂ ಅವರ ನಗರದ ಸೋಮೇಶ್ವರಪುರಂನಲ್ಲಿರುವ ನಿವಾಸದ ಮೇಲೂ ಆದಾಯ ತೆರಿಗೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ವಿವಿಧ ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ನಗರದ ಶಿರಾ ಗೇಟ್ ಬಳಿ ಇರುವ ಶ್ರೀದೇವಿ ಮೆಡಿಕಲ್ ಕಾಲೇಜು, ಶ್ರೀದೇವಿ ಇಂಜಿನಿಯರಿಂಗ್ ಕಾಲೇಜು ಹಾಗೂ ಶ್ರೀದೇವಿ ‌ಡಿಪ್ಲೋಮಾ ಕಾಲೇಜುಗಳಿಗೆ ಸಂಬಂಧಿಸಿದ ಕಡತಗಳನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಶ್ರೀದೇವಿ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದಂತೆ ದಾಖಲಾತಿಗಳ ಪರಿಶೀಲನೆಯನ್ನು ನಡೆಸಿರುವ ಆದಾಯ ತೆರಿಗೆ ಅಧಿಕಾರಿಗಳು ಇಂದು ಮಧ್ಯಾಹ್ನದ ನಂತರ ಈ ಬಗ್ಗೆ ನಿಖರ ಮಾಹಿತಿ ನೀಡುವ ಸಾಧ್ಯತೆ ಇದೆ.

TRENDING