Tuesday, April 13, 2021
Home ಕೋವಿಡ್-19 ದೇಶದಲ್ಲಿ 24 ಗಂಟೆಯಲ್ಲಿ 12,881 ಜನರಿಗೆ ಕೊರೊನಾ ಸೋಂಕು ಪತ್ತೆ

ಇದೀಗ ಬಂದ ಸುದ್ದಿ

ದೇಶದಲ್ಲಿ 24 ಗಂಟೆಯಲ್ಲಿ 12,881 ಜನರಿಗೆ ಕೊರೊನಾ ಸೋಂಕು ಪತ್ತೆ

 ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 12,881 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,09,50,201ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 101 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,56,014ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,37,342 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,06,56,845 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 11,987 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ ಈವರೆಗೆ 94,22,228 ಜನರಿಗೆ ಲಸಿಕೆ ಹಾಕಲಾಗಿದೆ.

TRENDING